SSLC Results 2025: ಫಲಿತಾಂಶ ಬರುವ ಮುನ್ನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್
Karnataka SSLC Results 2025: ರಾಜ್ಯದಲ್ಲಿ ಇತ್ತೀಚೆಗಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದ್ದು, ಇದೀಗ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ನಡುವೆಯೇ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯ ಸರ್ಕಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದವರಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತದೆ. ಜಿಲ್ಲಾ ಹಾಗೂ ವಲಯವಾರು ಅತೀ ಹೆಚ್ಚು ಅಂಕ ಗಳಿಸಿದ ಸರ್ಕಾರಿ ಪ್ರೌಢ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಈ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ರಜ್ಯ ಸರ್ಕಾರದಿಂದ ಪ್ರಕಟಣೆ ಹೊರಡಿಸಿದೆ. ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಇವರ ಪತ್ರದಲ್ಲಿ, ಏಪ್ರಿಲ್-2024ರ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿ ಜಿಲ್ಲೆಯ ಮೂರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ.
2024ನೇ ಸಾಲಿಗೆ ಜಿಲ್ಲಾವಾರು 115 ಮತ್ತು ವಲಯವಾರು 641 ಒಳಗೊಂಡಂತೆ ಒಟ್ಟಾರೆಯಾಗಿ 756 ಫಲಾನುಭವಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಕೈಗೊಂಡು ಸರಬರಾಜುದಾರರನ್ನು ಗುರುತಿಸಲಾಗಿದೆ. ಈ ಸಂಬಂಧ 3,25,16,940 ರೂಪಾಯಿಗಳ ಅನುದಾನದ ಅಗತ್ಯವಿದ್ದು, ಈಗಾಗಲೇ ನಿಗದಿಪಡಿಸಲಾದ 280.00 ಲಕ್ಷ ರೂಪಾಯಿಗಳಲ್ಲಿ 80 ಲಕ್ಷಗಳ ರೂಪಾಯಿ ಅನುದಾನ ಒದಗಿಸಲಾಗಿದೆ.
ಉಳಿದ 200 ಲಕ್ಷ ರೂಪಾಯಿಗಳನ್ನು ಲೆಕ್ಕ ಶೀರ್ಷಿಕೆ: 2202-01-109-0-10ಯ ಉಪಶೀರ್ಷಿಕೆ:059 ಅಡಿಯಲ್ಲಿ ಬಿಡುಗಡೆಗೊಳಿಸುವಂತೆ ಹಾಗೂ ಉಳಿದ ಅನುದಾನಕ್ಕಾಗಿ ಕೆಎಸ್‌ಕ್ಯೂಎಎಸಿ ವಿಭಾಗದಲ್ಲಿ ಉಳಿಕೆಯಿರುವ 9.30 ಲಕ್ಷ ರೂಪಾಯಿಗಳನ್ನು ಹಾಗೂ ಮಂಡಳುಯ ಅನುದಾನ 35,86,940 ರೂಪಾಯಿಗಳನ್ನು ಭರಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ.
2024-25ನೇ ಸಾಲಿನ ಮುಂದುವರಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುಮತಿ ನೀಡಲಾಗಿದೆ. ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯದ ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮಗಳು ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ:2202-01-109-0-107-059 (ಇತರೆ ವೆಚ್ಚಗಳು)ರಡಿ ನಿಗದಿಯಾಗಿರುವ 800 ಲಕ್ಷ ರೂಪಾಯಿಗಳಲ್ಲಿ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಿಸಲು 280 ಲಕ್ಷ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
ಗಮನಿಸಲೇಬೇಕಾದ ಪ್ರಮುಖ ಅಂಶಗಳು
* ಮೇಲ್ಕಂಡ ವಿಷಯಕ್ಕೆ ಒದಗಿಸಲಾದ ಅನುದಾನದಲ್ಲಿ ನಿಯಮಾನುಸಾರ ಅರ್ಹ ಪ್ರತಿಭಾವಂತ ಫಲಾನುಭವಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಲು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಬೆಂಗಳೂರು, ಇವರು ಕ್ರಮವಹಿಸಬೇಕಾಗುತ್ತದೆ.
* ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರೋತ್ಸಾಹಕವಾಗಿ ಲ್ಯಾಪ್‌ಟಾಪ್ ಪಡೆದಂತಹ ವಿದ್ಯಾರ್ಥಿಗಳನ್ನು ಮತ್ತೊಮ್ಮೆ ವಲಯ ಮಟ್ಟಕ್ಕೆ ಪರಿಗಣಿಸಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ.
* ಬಿಡುಗಡೆಯಾದ ಅನುದಾನಕ್ಕೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಇವರು ನಿಯಮಾನುಸಾರ ಲೆಕ್ಕ ಪತ್ರಗಳನ್ನು ಇಡತಕ್ಕದ್ದು.
* ಎಲ್ಲಾ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಶೀಘ್ರವಾಗಿ ವಿತರಿಸಬೇಕು ಹಾಗೂ ವಿತರಣೆ ಪೂರ್ಣಗೊಂಡ ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗುತ್ತದೆ.
* ಫಲಾನುಭವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲು ಹೊರಡಿಸಲಾದ ಕಛೇರಿ ಜ್ಞಾಪನವನ್ನು ಹಾಗೂ ಸದರಿ ಸರ್ಕಾರಿ ಆದೇಶವನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಹಾಗೂ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಈ ಕಛೇರಿಯ ವೆಬ್‌ಸೈಟ್‌ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.
* ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-1999ರ ನಿಯಮಗಳು ಮತ್ತು ತತ್ಸಂಬಂಧ ಕಾಲಕಾಲಕ್ಕೆ ಹೊರಡಿಸಲಾದ/ಹೊರಡಿಸಲಾಗುವ ಆದೇಶ/ಸುತ್ತೋಲೆಗಳ ಸೂಚನೆಗಳನ್ನು ಹಾಗೂ ಲ್ಯಾಪ್‌ಟಾಪ್ ಖರೀದಿ ಇ-ಟೆಂಡರ್ ಪ್ರಕ್ರಿಯೆಯ ದಸ್ತಾವೇಜಿನಲ್ಲಿ ನಿಗದಿಪಡಿಲಾಗಿರುವ ಪ್ರಚಲಿತ ನಿಯಮಗಳನ್ನು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 01 ಟಿಎಫ್‌ಪಿ 2025, ದಿನಾಂಕ 02.04.2025ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಲಾಗಿರುವ ಅಧಿಕಾರದನ್ವಯ ಹೊರಡಿಸಿದೆ ಎಂದು ತಿಳಿಸಿದೆ. ಹೀಗೆ ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕೆ ಅನುಕೂಲ ಆಗುವ ದೃಷ್ಟಿಯಿಂದ ಇಂತಹ ಯೋಜನೆಗಳನ್ನು ಜಾರಿ ಮಾಡುತ್ತಲೇ ಇರುತ್ತದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications