SSLC Results: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಇಂದಿನಿಂದಲೇ ಪಿಯುಸಿಗೆ ಅರ್ಜಿ ಸಲ್ಲಿಕೆ ಆರಂಭ!
ಬೆಂಗಳೂರು, ಮೇ 02: ಇಂದು SSLC exam results 2025 ಪ್ರಕಟಗೊಳ್ಳಲಿದೆ. ಇದರ ಬೆನ್ನಲ್ಲೆ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಕರ್ನಾಟಕದಲ್ಲಿ 'ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ' ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 'ಮೂರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು' ಮತ್ತು' ಡಾ.ಎಪಿಜೆ ಅಬ್ದುಲ್ ಕಲಾಮ್ ಪದವಿ ಪೂರ್ವ ವಸತಿ ಕಾಲೇಜು'ಗಳ 2025-26ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ವರ್ಷದಲ್ಲಿ ಯಾರೆಲ್ಲ ಕರ್ನಾಟಕ ಎಸ್‌ಎಸ್‌ಎಲ್ಸಿ ಪರೀಕ್ಷೆ ಯಲ್ಲಿ ಉತ್ತೀರ್ಣವಾಗಿರುತ್ತೀರಿ. ಅವರೆಲ್ಲರು 'ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ' ವ್ಯಾಪ್ತಿಯ ಈ ಕಾಲೇಜುಗಳಿಗೆ ಅರ್ಜಿ ಸಲ್ಲಿಸಲು ಅರ್ಹಾರಾಗುತ್ತೀರಿ.

SSLC result 2025 ಫಲಿತಾಂಶ ಬಿಡುಗಡೆ ಆದ ದಿನದಿಂದಲೇ 'ಮೂರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು' ಮತ್ತು' ಡಾ.ಎಪಿಜೆ ಅಬ್ದುಲ್ ಕಲಾಮ್ ಪದವಿ ಪೂರ್ವ ವಸತಿ ಕಾಲೇಜು'ಗಳಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅರ್ಜಿಯನ್ನು ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀವು https://sevasindhuservices.karnataka.gov.in/ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
ಇಲ್ಲಿ ಸಿಗುವ ಸೌಲಭ್ಯಗಳು ಏನೇನು?
* ಅನುಭವ ನುರಿತ ಉಪನ್ಯಾಸಕರಿಂದ ಬೋಧನೆ
* ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿ ಸೌಲಭ್ಯ ಸೇವೆ
* ಗುಣಮಟ್ಟದ ಸುಸಜ್ಜಿತ ಗ್ರಂಥಾಲಯ
* ಕಂಪ್ಯೂಟರ್, ಗ್ರಂಥಾಲಯ, ಸಭಾಂಗಣ ಆಟದ ಮೈದಾನ ಹಾಗೂ ಜಿಮ್ ವ್ಯವಸ್ಥೆ
* ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ಫಿಸಿಕ್ಸ್ ವಾಲ್ಹಾ ವತಿಯಿಂದ ಉಚಿತ CET/NEET/JEE ಪರೀಕ್ಷೆಗಳ ತರಬೇತಿ ನೀಡಲಾಗುತ್ತದೆ.
* ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಉಚಿತ ಸಿಎ ಫೌಂಡೇಷನ್ ಅಥವಾ CLAT ತರಬೇತಿ.

SSLC Result ಬಿಡುಗಡೆ: ಪರಿಶೀಲನೆ ಹೇಗೆ?
ಕರ್ನಾಟಕದಲ್ಲಿ ಇಂದು ಮೇ 02ರಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ವತಿಯಿಂದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ. ವಿದ್ಯಾರ್ಥಿಗಳು https://karresults.nic.in/ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ರಾಜ್ಯಾದ್ಯಂತ 9 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು.
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಧಿಯಲ್ಲಿ Karnataka SSLC Results 2025 ಮಹತ್ವದ ಘಟ್ಟ. ಇಲ್ಲಿ ಹೆಚ್ಚಿನ ಅಂಕ ಪಡೆದರೆ ಭವಿಷ್ಯದಲ್ಲಿ ಹೆಚ್ಚಿನ ಅನುಕೂಲ ಆಗುತ್ತದೆ ಎಂಬ ಭಾವನೆ. ಈ ಕಾರಣದಿಂದ ಇಂದಿನ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು, ಮತ್ತವರ ಪೋಷಕರು ಕಾಯುತ್ತಿದ್ದಾರೆ. ಇಂದು ಅವರ ಕುತೂಹಲಗಳಿಗೆ ತೆರೆ ಬೀಳಲಿದೆ.
-
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
ನಿಮ್ಮ ಮನೆಯ ಸಮೀಪ ಸರ್ಕಾರಿ ಪಿಯು ಕಾಲೇಜು ಎಲ್ಲಿದೆ ಗೊತ್ತೇ? ಅವರಿವರನ್ನು ಕೇಳಿ ದಿಕ್ಕುತಪ್ಪಬೇಡಿ, ಇಲ್ಲಿದೆ ಮಾಹಿತಿ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications