ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಸ್ಎಲ್‌ಸಿ ಫಲಿತಾಂಶ 2022: ಮರು ಎಣಿಕೆ, ಮೌಲ್ಯಮಾಪನ ಅರ್ಜಿ ಸಲ್ಲಿಕೆ ವಿವರ

|
Google Oneindia Kannada News

ಬೆಂಗಳೂರು, ಮೇ 19: ಕರ್ನಾಟಕ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಎಸ್ಎಸ್ಎಲ್ ಸಿ ಉತ್ತರ ಪತ್ರಿಕೆ ಮರು ಎಣಿಕೆ ಹಾಗೂ ಮರು ಮೌಲ್ಯಮಾಪನ ದಿನಾಂಕವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಗುರುವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಿದ ಬಳಿಕವೇ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪತ್ರಿಕೆ ಪಡೆಯುವ ಬಗ್ಗೆ ದಿನಾಂಕವನ್ನು ಪ್ರಕಟಿಸಿದ್ದು, ಈ ಕೆಳಕಂಡಂತಿದೆ.

SSLC Result 2022: ಕೂಲಿ ಕೆಲಸದಾಕೆಯ ಮಗ ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮSSLC Result 2022: ಕೂಲಿ ಕೆಲಸದಾಕೆಯ ಮಗ ಅಮಿತ್ ಮಾದರ್ ರಾಜ್ಯಕ್ಕೆ ಪ್ರಥಮ

ಮರು ಎಣಿಕೆ ಮತ್ತು ಮರು ಮೌಲ್ಯಮಾಪನ:

ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ. 20 ರಿಂದ ಮೇ. 30 ರೊಳಗೆ ಕೊನೆ ದಿನಾಂಕ ನಿಗದಿ ಪಡಿಸಲಾಗಿದೆ.

ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 20-05-2022

ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ: 30 -05-2022

ಡೆಬಿಟ್ ಕಾರ್ಡ್ , ಕ್ರೆಡಿಟ್ ಕಾರ್ಡ್, ಆನ್‌ ಲೈನ್ ಮೂಲಕ ಅಲ್ಲಿ ಸಲ್ಲಿಸಿದ ಬಳಿಕ ಬ್ಯಾಂಕ್ ನಲ್ಲಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 31 -05-2022

Karnataka SSLC Revaluation / Recounting 2022: Fee, Last Date and How to Apply Online

ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 24-05-2022

ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 06 -06-2022

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24-05-2022

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ: 06 -06-2022

ಮರು ಮೌಲ್ಯಮಾಪನ ಮತ್ತು ಸ್ಕ್ಯಾನ್ ಪ್ರತಿ ಪಡೆಯಲು ಶುಲ್ಕದ ವಿವರ: ಎಸ್ಎಸ್ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಒಂದು ವಿಷಯಕ್ಕೆ 410 ರೂ. ಶುಲ್ಕ ಪಾವತಿಸಬೇಕು. ಮರು ಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 810 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಅನ್‌ಲೈನ್ ನಲ್ಲಿ ಸಲ್ಲಿಸಿದರೆ ಈ ಶುಲ್ಕ ಪಾವತಿಸಬೇಕು. ಆಫ್‌ ಲೈನ್ ಮೂಲಕ ಪಾವತಿ ಮಾಡಿದರೆ ಹೆಚ್ಚುವರಿ ಹತ್ತು ರೂ. ಪಾವತಿಸಬೇಕು.

Karnataka SSLC Revaluation / Recounting 2022: Fee, Last Date and How to Apply Online

ಸ್ಕ್ಯಾನ್ ಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಭೌತಿಕವಾಗಿ ಅರ್ಜಿ ಸಲ್ಲಿಸುವುದನ್ನು ರದ್ದು ಮಾಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್ ತಣ sslc.Karnataka.gov. in ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ನಿಗಧಿತ ಪೋರ್ಟ್ ಲ್ ನಲ್ಲಿ ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಚಲನ್ ಡೌನ್‌ ಲೋನ್ ಮಾಡಿಕೊಂಡು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಹ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸಿದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳ ಮೊಬೈಲ್ ಗೆ ಸಂದೇಶ ಬರಲಿದೆ.

Recommended Video

ರಷ್ಯಾ ಜೊತೆಗಿನ ಭಾರತದ ಬಂಧ ಬಿಡಿಸಲು ಅಮೆರಿಕದಿಂದ ಭಾರತಕ್ಕೆ ಬಿಗ್ ಆಫರ್ | Oneindia Kannada

English summary
Karnataka SSLC Revaluation / Recounting 2022: Fee, Last Date and How to Apply Online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X