SSLC: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ದಿನವೇ ಸಂಕಷ್ಟ!
SSLC: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿವೆ. ಈ ರೀತಿ ಇರುವಾಗಲೇ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್‌ವೊಂದು ಎದುರಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಶುರುವಾಗಿರುವ ಭಾಷಾ ವಿವಾದ ಹೊಸ ಸ್ವರೂಪವನ್ನು ಪಡೆದುಕೊಂಡಿದ್ದು. ಇದೀಗ ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು ಒಂದಾಗಿದ್ದು. ಮರಾಠಿ ಹಾಗೂ ಎಂಇಎಸ್ ಪುಂಡರ ಪುಂಡಾಟವನ್ನು ವಿರೋಧಿಸಿ ಉಗ್ರ ಹೋರಾಟಕ್ಕೆ ಮುಂದಾಗಿವೆ. ಇದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಕರ್ನಾಟಕದ ಬೆಳಗಾವಿಯಲ್ಲಿ ಮರಾಠಿ ಪುಂಡರು ಹಾಗೂ ಎಂಇಎಸ್ ಕಿರಿಕಿರಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಭಾಗದಲ್ಲಿ ಪರಿಸ್ಥಿತಿ ತಿಳಿಯಾಯಿತು ಎನ್ನುವಾಗಲೇ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರಿಗೆ ಮತ್ತೆ ಮಸಿ ಬಳಿಯಲಾಗಿದ್ದು ಸಂಕಷ್ಟ ಎದುರಾಗಿದೆ. ಈ ರೀತಿ ಇರುವಾಗಲೇ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟದ ಎಚ್ಚರಿಕೆಯನ್ನು ಕೊಟ್ಟಿವೆ. ಇದರಿಂದ ಮಾರ್ಚ್‌ನಲ್ಲಿ ಪರೀಕ್ಷೆ ಎದುರಿಸಲಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವ ಆತಂಕವೂ ಎದುರಾಗಿದೆ. ಅದರ ವಿವರ ಮುಂದೆ ನೋಡೋಣ..

ಕರ್ನಾಟಕದಲ್ಲಿ ಕನ್ನಡಪರ ಸಂಘಟನೆಗಳು ಒಂದಾಗಿದ್ದು. ಮಾರ್ಚ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದರೆ ಇದರಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಮಾರ್ಚ್ 21ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಶುರುವಾಗುತ್ತಿದೆ. ಇನ್ನು ಮಾರ್ಚ್ 21ರಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ. ಈ ರೀತಿ ಇರುವಾಗಲೇ ಮಾರ್ಚ್ 22ಕ್ಕೆ ಕರ್ನಾಟಕ ಬಂದ್ ಘೋಷಿಸಲಾಗಿದೆ.
ಮಾರ್ಚ್ 21ರಂದು ಪರೀಕ್ಷೆ ನಡೆಯಲಿದೆ. ಮಾರ್ಚ್ 22ರ ಶನಿವಾರ ಕರ್ನಾಟಕ ಬಂದ್ ಘೋಷಿಸಲಾಗಿದೆ. SSLC ಪರೀಕ್ಷಾ ವೇಳಾಪಟ್ಟಿಯ ಪ್ರಕಾರ, ಮಾರ್ಚ್ 22ಕ್ಕೆ ಅಂದರೆ ಶನಿವಾರ ಯಾವುದೇ ಪರೀಕ್ಷೆ ಇಲ್ಲ ಎಂದು ಈಗಾಗಲೇ ಶಿಕ್ಷಣ ಇಲಾಖೆ ಹೇಳಿದೆ. ಮಾರ್ಚ್ 24ಕ್ಕೆ ಗಣಿತ, ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ವಿವಿಧ ಜಿಲ್ಲೆಗಳಲ್ಲಿ ಪರೀಕ್ಷೆ ಮುಗಿಸಿ ಬರಲಿರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು. ಮಾರ್ಚ್ 22ಕ್ಕೆ ಯಾವುದೇ SSLC ಪರೀಕ್ಷೆ ನಿಗದಿ ಆಗಿಲ್ಲ. ಆದರೆ, ಮಾರ್ಚ್ 21ರಂದು ಪರೀಕ್ಷೆ ಮುಗಿಸಿ ಬರುವವರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ಒಂದಾದ ಕನ್ನಡಪರ ಸಂಘಟನೆಗಳು: ಇನ್ನು ರಾಜ್ಯದಲ್ಲಿ ಹಾಗೂ ಕನ್ನಡಿಗರ ಮೇಲೆ ಕೆಲವು ಮರಾಠಿ ಪುಂಡರು ಹಾಗೂ ಎಂಇಎಸ್ ಅವರ ಪುಂಡಾಟ ಹೆಚ್ಚಾಗುತ್ತಿರುವುದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕನ್ನಡಪರ ಸಂಘಟನೆಗಳು ಈ ವಿಚಾರದಲ್ಲಿ ಒಂದಾಗಿದ್ದು. ಕನ್ನಡ ಚಲನಚಿತ್ರರಂಗ ಹಾಗೂ ಫಿಲ್ಮಿ ಚೇಂಬರ್ ಸಹ ಇದಕ್ಕೆ ಬೆಂಬಲ ಸೂಚಿಸಿವೆ.
ಎಂಇಎಸ್ ಪುಂಡರ ಹಾವಳಿಗೆ ಕಡಿವಾಣ ಹಾಕಬೇಕು. ಕನ್ನಡಿಗ ಬಸ್ ಕಂಡೆಕ್ಟರ್ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.












Click it and Unblock the Notifications