ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಫೇಲಾದವರಿಗೆ ಮತ್ತೊಂದು ಅವಕಾಶ

ಬೆಂಗಳೂರು , ಜೂನ್ 07: ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮತ್ತೊಂದು ಅವಕಾಶವನ್ನು ನೀಡಿದೆ. ಜೂನ್ 2022ರ ಪೂರಕ ಪರೀಕ್ಷೆಯನ್ನು ಅಂತಮವಾಗಿ ದಿನಾಂಕವನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.

ಕೋವಿಡ್ ನಂತರದಲ್ಲಿ ನಡೆದ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಅನುತ್ತೀರ್ಣರಾದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಮೇ 30 ವರೆಗೂ ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೂ ಪೋಷಕರು ಮತ್ತು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಎರಡು ಸಲ ಪರೀಕ್ಷೆಗೆ ನೊಂದಾಯಿಸಿಕೊಳ್ಳಲು ಸಮಯಾವಕಾಶವನ್ನು ನೀಡಿ ದಿನಾಂಕವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ದಿನಾಂಕವನ್ನು ಮುಂದೂಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದ್ದು ಇದು ಕೊನೆಯ ಅವಕಾಶ ಎಂದು ತಿಳಿಸಿದೆ.

ವಿದ್ಯಾರ್ಥಿಗಳು ಶಾಲಾ ಲಾಗಿನ್ ಮೂಲಕ ನೊಂದಾಯಿಸಿಕೊಳ್ಳಲು ಜೂನ್ 9, ಭೌತಿಕವಾಗಿ ಮಂಡಳಿಯ ಚಲನ್ ಮೂಲಕ ನೊಂದಾಯಿಸಿಕೊಳ್ಳಲು ಜೂನ್ 10, ಎಂದು ತನ್ನ ಆದೇಶದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ತಿಳಿಸಿದೆ. ಇನ್ನು ಪೂರಕ ಪರೀಕ್ಷೆಯ ವೇಳಾಪಟ್ಟಿಯೂ ಬಿಡುಗಡೆಯಾಗಿದ್ದು. ಜೂನ್ 2022 ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಾಗಲು ಅನುಕೂಲವಾಗಲಿದೆ.

Karnataka SSLC Supplementary 2022 Exam registration date extended and Time Table

ಪೂರಕ ಪರೀಕ್ಷೆಯ ವೇಳಾಪಟ್ಟಿ:

ಜೂನ್ 2022 ಪೂರಕ ಪರೀಕ್ಷೆ ವೇಳಾಪಟ್ಟಿ

ದಿನಾಂಕ 27.06.2022(ಸೋಮವಾರ) - ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ.

ದಿನಾಂಕ 28.06.2022(ಮಂಗಳವಾರ) -ಪ್ರಥಮ ಭಾಷೆ (ಕನ್ನಡ, ತೆಲುಗು,ಹಿಂದಿ,ಮರಾಠಿ,ಉರ್ದು, ಇಂಗ್ಲೀಷ್, ಸಂಸ್ಕೃತ)

ದಿನಾಂಕ 29.06.2022(ಬುಧವಾರ) - ದ್ವಿತೀಯ ಭಾಷೆ(ಇಂಗ್ಲಿಷ್,ಕನ್ನಡ)

ದಿನಾಂಕ 30.06.2022(ಗುರುವಾರ) - ಸಮಾಜ ವಿಜ್ಞಾನ

Karnataka SSLC Supplementary 2022 Exam registration date extended and Time Table

ದಿನಾಂಕ 01.07.2022(ಶುಕ್ರವಾರ) - ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು(ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್)

ದಿನಾಂಕ 02.07.2022(ಶನಿವಾರ) ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2,ಇಂಜಿನಿಯರ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ದಿನಾಂಕ 03.07.2022(ಭಾನುವಾರ) ರಜೆ ದಿನ

ದಿನಾಂಕ 04.07.2022(ಸೋಮವಾರ) ಗಣಿತ, ಸಮಾಜ ಶಾಸ್ತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+