ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ
ಬೆಂಗಳೂರು, ಆಗಸ್ಟ್ 24: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 27 ಹಾಗೂ 29ರಂದು ನಡೆಯಲಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವವರು ಸಂಪೂರ್ಣ ವೇಳಾಪಟ್ಟಿಯನ್ನು ಕೆಬಿ ಅಧಿಕೃತ ವೆಬ್‌ಸೈಟ್ sslc.karnataka.gov.in ನಲ್ಲಿ ಪರಿಶೀಲಿಸಬಹುದು.
ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 27 ರಂದು ಮೊದಲ ಶಿಫ್ಟ್ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಮತ್ತು ಎರಡನೇ ಶಿಫ್ಟ್ ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ. ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳನ್ನು ಸೆಪ್ಟೆಂಬರ್ 30, 2021 ರಂದು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ.

ಇನ್ನು ಹಿಂದುಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಪ್ರಾಕ್ಟಿಕಲ್ ಪರೀಕ್ಷೆಯನ್ನು ಸೆಪ್ಟೆಂಬರ್ 27 ರಂದು ಮಧ್ಯಾಹ್ನ 2.30 ರಿಂದ 4 ರವರೆಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆಗಸ್ಟ್ 9, 2021 ರಂದು ಘೋಷಿಸಲಾಗಿದ್ದು, ಈ ಬಾರಿ ಒಟ್ಟಾರೆ ಉತ್ತೀರ್ಣ ಶೇಕಡಾ 99.9 ರಷ್ಟಿತ್ತು.
ಪರೀಕ್ಷೆಯು ಜುಲೈ ತಿಂಗಳಲ್ಲಿ ನಡೆದ ಮಾದರಿಯಲ್ಲಿಯೇ ಎರಡು ದಿನಗಳ ಕಾಲ ನಡೆಯಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. ಎರಡೂ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳನ್ನು ನೀಡಲಾಗಿರುತ್ತದೆ. ಪ್ರತಿ ವಿಷಯಕ್ಕೆ 40 ಅಂಕಗಳನ್ನು ನಿಗದಿಪಡಿಸಲಾಗಿದೆ.
2020-21ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು ಕೊವಿಡ್ ಕಾರಣಕ್ಕೆ ಹಾಜರಾಗದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು. ಪರೀಕ್ಷೆಯು ಸಪ್ಟೆಂಬರ್ ತಿಂಗಳಲ್ಲೇ ನಿಗದಿಪಡಿಸಲಾಗಿದೆ ಆದರೆ ಪೂರಕ ಪರೀಕ್ಷೆಯ ದಿನಾಂಕ ಇನ್ನು ಬಿಡುಗಡೆ ಮಾಡಲಾಗಿಲ್ಲ.
ಈ ಭಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜುಲೈ 19 ಹಾಗೂ 22ರಂದು ನಡೆಸಲಾಗಿತ್ತು. ಒಂದು ದಿನದಲ್ಲಿ ಮೂರು ಪರೀಕ್ಷೆಗಳಂತೆ ಎರಡು ದಿನಗಳಲ್ಲಿ ಆರು ವಿಷಯಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಬಹು ಆಯ್ಕೆ ಪ್ರಶ್ನೆಗಳನ್ನೊಳಗೊಂಡ ಪರೀಕ್ಷೆ ಇದಾಗಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳ ಪ್ರಶ್ನೆಗಳನ್ನು ನೀಡಲಾಗಿತ್ತು.
ಪರೀಕ್ಷೆಗೆ ಶೇ 99.65ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. 4,885 ಪರೀಕ್ಷಾ ಕೇಂದ್ರ, 73, 064 ಪರೀಕ್ಷಾ ಕೊಠಡಿಯಲ್ಲಿ ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.
ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು.
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ, ಇನ್ನು ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆಗಳು ನಡೆಯಲಿವೆ.












Click it and Unblock the Notifications