ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ 50% ವಿದ್ಯಾರ್ಥಿಗಳು ಪಾಸ್
ಬೆಂಗಳೂರು, ಜುಲೈ 13: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ನಡೆದಿದ್ದ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಬಾರಿ ಒಟ್ಟು 2,42,951 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇಕಡಾ 50.81 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಒಟ್ಟು 1,23,443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತನ್ವೀರ್ ಸೇಠ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುತ್ತದೆ. ಪರೀಕ್ಷೆ ಬರೆದವರು ವೆಬ್ಸೈಟಿಗೆ ಹೋಗಿ ಹಾಲ್ ಟಿಕೆಟ್ ನಂಬರ್ ಹಾಕಿ ಫಲಿತಾಂಶ ಪಡೆಯಬಹುದು.

http://sslc.kar.nic.in ಮತ್ತು http://karresults.nic.in ವೆಬ್ಸೈಟ ನಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಲಭ್ಯವಾಗಲಿದೆ.
ಇನ್ನು ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ನಾಳೆ ಅಂದರೆ ಜುಲೈ 14ರಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.












Click it and Unblock the Notifications