Breaking News: ನಾಳೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು, ಅಕ್ಟೋಬರ್ 10: ನಾಳೆ (ಅಕ್ಟೋಬರ್ 11) ರಂದು ಬೆಳಿಗ್ಗೆ 10 ಗಂಟೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಲಿದೆ ಎಂದು ವರದಿಯು ತಿಳಿಸಿದೆ.
ಕರ್ನಾಟಕ ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅಕ್ಟೋಬರ್ 11 ರಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 27 ಹಾಗೂ 29ರಂದು ನಡೆದಿತ್ತು. ಕೊರೊನಾ ವೈರಸ್ ಸೋಂಕು ಕಾರಣದಿಂದಾಗಿ ಈ ಪರೀಕ್ಷೆಯನ್ನು ಬಹಳ ಸರಳೀಕೃತ ಮಾದರಿಯ್ಲಲಿ ನಡೆಸಲಾಗಿತ್ತು. ಒಂದು ದಿನ ಐಚ್ಛಿಕ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ 40 ಅಂಕಗಳಿಗೆ ನಡೆದ ಪರೀಕ್ಷೆಯ ಫಲಿತಾಂಶವು ನಾಳೆ ಪ್ರಕಟವಾಗಲಿದೆ.
ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸೆಪ್ಟೆಂಬರ್ 27 ರಂದು ಮೊದಲ ಶಿಫ್ಟ್ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಮತ್ತು ಎರಡನೇ ಶಿಫ್ಟ್ ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ. ಜೆಟಿಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳನ್ನು ಸೆಪ್ಟೆಂಬರ್ 30, 2021 ರಂದು ಆಯಾ ಶಾಲೆಗಳಲ್ಲಿ ನಡೆಸಲಾಗಿತ್ತು. ಇನ್ನು ಹಿಂದುಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಪ್ರಾಕ್ಟಿಕಲ್ ಪರೀಕ್ಷೆಯನ್ನು ಸೆಪ್ಟೆಂಬರ್ 27 ರಂದು ಮಧ್ಯಾಹ್ನ 2.30 ರಿಂದ 4 ರವರೆಗೆ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ, ಇನ್ನು ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆಗಳು ನಡೆದಿತ್ತು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆಗಸ್ಟ್ 9, 2021 ರಂದು ಘೋಷಿಸಲಾಗಿದ್ದು, ಈ ಬಾರಿ ಒಟ್ಟಾರೆ ಉತ್ತೀರ್ಣ ಶೇಕಡಾ 99.9 ರಷ್ಟಿತ್ತು. 2020-21ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು ಕೊವಿಡ್ ಕಾರಣಕ್ಕೆ ಹಾಜರಾಗದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಲು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಮೂಲಕ ಅವಕಾಶ ನೀಡಲಾಗಿತ್ತು.
(ಒನ್‌ಇಂಡಿಯಾ ಸುದ್ದಿ)












Click it and Unblock the Notifications