SSLC Supplementary Exam Result: ನಾಳೆಯೇ SSLC ಪೂರಕ ಪರೀಕ್ಷೆ ಫಲಿತಾಂಶ, ರಿಸಲ್ಟ್ ನೋಡುವುದು ಹೇಗೆ?

ಬೆಂಗಳೂರು, ಜೂನ್‌ 29: ಜೂನ್ 2023ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ (ಜೂನ್‌ 30)ರಂದು ಪ್ರಕಟವಾಗಲಿದೆ. karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂನ್‌ 12ರಿಂದ ಜೂನ್‌ 19ರವರೆಗೆ ನಡೆದಿದ್ದು, ರಾಜ್ಯದಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ದಿನಾಂಕ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಮುಂದಾಗಿದೆ.

SSLC Supplementary Exam Result 2023 Date And Time Details

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?

* ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.

*ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

*ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು.

*ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.

*ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

2023 ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 8,35,102 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಒಟ್ಟಾರೆ ಶೇಕಡ 83.89 ರಷ್ಟು ಫಲಿತಾಂಶ ದಾಖಲಾಗಿತ್ತು. 3,59,511 ಬಾಲಕಿಯರು ಹಾಗೂ 3,41,108 ಬಾಲಕರು ಉತ್ತೀರ್ಣರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+