ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಗಿ ಭದ್ರತೆಯೊಂದಿಗೆ ಜೂ.21ರಿಂದ sslc ಪೂರಕ ಪರೀಕ್ಷೆ ಆರಂಭ

|
Google Oneindia Kannada News

ಬೆಂಗಳೂರು, ಜೂನ್ 15: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇದೇ ಜೂನ್ 21ರಿಂದ 28ರವರೆಗೆ ಬಿಗಿ ಭದ್ರತೆಯೊಂದಿಗೆ ಎಸ್ ಎಸ್‌ ಎಲ್ ಸಿ ಪೂರಕ ಪರೀಕ್ಷೆಯನ್ನು ನಡೆಸಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆ ಜಾರಿಯಲ್ಲಿರಲಿದೆ.

SSLC: ಬೆಂಗಳೂರಿನ 21 ಖಾಸಗಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶSSLC: ಬೆಂಗಳೂರಿನ 21 ಖಾಸಗಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ

ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆಗೆ ಹಾಗೂ ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲು ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ಬೆಂಗಳೂರು ಉತ್ತರ ಜಿಲ್ಲೆ ಉಪ ನಿರ್ದೇಶಕರು ಪತ್ರದ ಮೂಲಕ ಕೋರಿದ್ದು, ಅದರಂತೆ ಆದೇಶ ಹೊರಡಿಸಲಾಗಿದೆ.

SSLC supplementary exams will start form june 21

ಎಸ್ ಎಸ್‌ ಎಲ್ ಸಿ ಪೂರಕ ಪರೀಕ್ಷೆಗಳನ್ನು ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರಕರಣದ ಅನ್ವಯ ಜೂನ್ 21 ರಿಂದ 28ರವರೆಗೆ ಪರೀಕ್ಷೆಗಳು ನಡೆಯುವ ದಿನಗಳಂದು ಹಾಗೂ ಪರೀಕ್ಷಾ ಸಮಯದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ 74 ಮತ್ತು ಬೆಂಗಳೂರು ಉತ್ತರ ಜಿಲ್ಲೆಯ 53 ಪರೀಕ್ಷಾ ಕೇಂದ್ರಗಳ, ಒಟ್ಟು 127 ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಆ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿರುವುದಾಗಿ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

English summary
karnataka secondary education examination board announced sslc supplementary exams will start from june 21 with full security
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X