ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ: ಬಾಲಕಿಯರೇ ಮೇಲುಗೈ
ಬೆಂಗಳೂರು, ಅ.11: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದ್ದು, ಒಟ್ಟಾರೆ ಶೇ.55.54ರಷ್ಟು ಫಲಿತಾಂಶ ಬಂದಿದೆ.
2020-21ನೇ ಸಾಲಿನ ಪೂರಕ ಪರೀಕ್ಷೆಯನ್ನು ಕಳೆದ ಸೆಪ್ಟೆಂಬರ್ 27 ಮತ್ತು 29ರಂದ ನಡೆಸಲಾಗಿತ್ತು. ಒಟ್ಟಾರೆ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.55.54ರಷ್ಟು ಫಲಿತಾಂಶ ಬಂದದೆ. ಫಲಿತಾಂಶ ವಿವರಗಳನ್ನು ವೆಬ್ಸೈಟ್ (http://karresults.nic.in ಹಾಗೂ https:kseeb.karnataka.gov.in/sslcseptresults2021) ಪರಿಶೀಲಿಸಬಹುದು. ಫಲಿತಾಂಶದ ವಿವರಗಳನ್ನು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗಳಿಗೆ ಮಧ್ಯಾಹ್ನ 3 ಗಂಟೆಯ ನಂತರ ಕಳುಹಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.
ಹೆಣ್ಣುಮಕ್ಕಳೇ ಮೇಲುಗೈ
ಪ್ರತಿಬಾರಿಯಂತೆ ಪೂರಕ ಪರೀಕ್ಷೆಯಲ್ಲಿಯೂ ಸಹ ಬಾಲಕಿಯರೇ ಮೇಲುಗೈ ಪಡೆದಿದ್ದಾರೆ. 17,973 ವಿದ್ಯಾರ್ಥಿನಿರು ಪರೀಕ್ಷೆ ಬರೆದಿದ್ದರು. ಅದರಲ್ಲಿ 10,290 ವಿದ್ಯಾರ್ಥಿನಿಯರು ಉತ್ತೀರ್ಣರಾಗಿ ಶೇ.57.25 ರಷ್ಟು ಪಾಸಾಗಿದ್ದಾರೆ. ಬಾಲಕರು 35,182 ಮಂದಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 19,232 ಮಂದಿ ಪಾಸಾಗಿ ಶೇ. 54.66 ಫಲಿತಾಶ ಪಡೆದದಿದ್ದಾರೆ.

ಇನ್ನು ಶಾಲಾವಾರು ನೋಡಿದಾಗ ಸರ್ಕಾರಿ ಶಾಲೆಗಳಿಗೆ ಶೇ.58.05, ಅನುದಾನಿತ ಶಾಲೆಗಳಿಗೆ ಶೇ.54.08 ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಶೇ.50.7 ರಷ್ಟು ಫಲಿತಾಂಶ ಬಂದಿದೆ.
-
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ









Click it and Unblock the Notifications