ಲೋಕಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಎಸ್‌ ಟಿ ಸೋಮಶೇಖರ್ ಸ್ಪರ್ಧೆ? ಈ ಕ್ಷೇತ್ರದಿಂದ ಕಣಕ್ಕೆ

ಬೆಂಗಳೂರು, ಫೆಬ್ರವರಿ 27: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲ ಕಂಡ ಬಳಿಕ ಹಲವು ಬಿಜೆಪಿ ನಾಯಕರು ಕಾಂಗ್ರೆಸ್‌ ನತ್ತ ಮುಖ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ಕಾಂಗ್ರೆಸ್‌ ಸಂಪರ್ಕದಲ್ಲಿರುವ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ.

ಹೌದು, ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನ ಹಾಡಿ ಹೊಗಳಿದ್ರು. ಇದೀಗ ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಪರ ಅಡ್ಡ ಮತದಾನ ಮಾಡಿದ್ದು, ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿ ಗೆ ಕೈ ಕೊಟ್ಟು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ST Somashekar is Likely to Contest in Lok Sabha Elections 2024: Know Which Constituency

ಸಿದ್ದರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ. 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಬಾಷಣ ಮಾಡಿದ್ರು, ಇದೀಗ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ ಹಾಕುವ ಮೂಲಕ ಅನುದಾನ ಕೊಟ್ಟವರಿಗೆ ಆತ್ಮಸಾಕ್ಷಿಯ ಮತ ಹಾಕಿದ್ದೇವೆ ಎಂದು ಎಸ್‌ ಟಿ ಸೋಮಶೇಖರ್‌ ಅವರು ಹೇಳಿಕೆ ಹಿಂದೆ ಹಲವು ಲೆಕ್ಕಾಚಾರಗಳಿವೆ.

ಈಗಾಗಲೇ ನಿರಂತರವಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ ಕೆ ಶಿವಕುಮಾರ್‌ ಅವರ ಜೊತೆಗೆ ಸಂಪರ್ಕದಲ್ಲಿರುವ ಎಸ್‌ ಟಿ ಸೋಮಶೇಖರ್‌ ಕಮಲ ಬಿಟ್ಟು ಕೈ ಹಿಡಿಯುವ ನಿಟ್ಟಿನಲ್ಲಿ ಈಗಾಗಲೇ ಸಜ್ಜಾಗಿದ್ದಾರೆ. ಅಲ್ಲದೇ ಬಿಜೆಪಿಯಿಂದ ಯಶವಂತಪುರ ಶಾಸಕ ಎಸ್‌ ಟಿ ಸೋಮಶೇಖರ್‌ ಅವರನ್ನ ಕರೆತರುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಲೋಕಸಭಾ ಚುನಾವಣಾ ಟಿಕೆಟ್‌ ಆಫರ್‌ ನೀಡಿದ್ದಾರೆ ಎನ್ನಲಾಗಿದೆ.

ST Somashekar is Likely to Contest in Lok Sabha Elections 2024: Know Which Constituency

ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಮೈತ್ರಿಯಾಗಿರುವ ಬಿಜೆಪಿ ಹಾಗೂ ದಳಪತಿ ನಾಯಕರಿಗೆ ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಶಾಕ್‌ ಕೊಡಲು ತಯಾರಿ ನಡೆಸಿದ್ದು, ಈ ವಾರದೊಳಗೆ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಲೋಕಸಭಾ ಚುನಾವಣೆ ಗೆ ತಯಾರಿ ನಡೆಸಿಸರುವ ಕಾಂಗ್ರೆಸ್‌ ನಾಯಕರು, 20 ಸ್ಥಾನಗಳನ್ನಗೆಲ್ಲುವ ಗುರಿಯನ್ನ ಹಾಕಿಕೊಂಡಿದೆ. ಅಲ್ಲದೇ ಮುಂದಿನ ಬಿಬಿಎಂಪಿ ಚುನಾವಣೆಯಲ್ಲೂ ಗೆಲ್ಲುವ ಸಾಧಿಸುವ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್‌ ಮಹಾ ತಂತ್ರಗಾರಿಕೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಬಿಬಿಎಂಪಿ ಚುನಾವಣೆಯ ದೃಷ್ಠಿಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಎರಡು ಲೋಕಸಭಾ ಕ್ಷೇತ್ರವನ್ನ ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡಿರುವ ಕಾಂಗ್ರೆಸ್‌, ಬೆಂಗಳೂರು ಉತ್ತರದಿಂದ ಮಾಜಿ ಸಚಿವ ಎಸ್‌ ಟಿ ಸೋಮಶೇಖರ್‌ ಅವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಮಾಸ್ಟರ್‌ ಪ್ಲಾನ್‌ ನಡೆಸಿದೆ. ಇನ್ನೂ ಎಸ್‌ ಟಿ ಸೋಮಶೇಖರ್‌ ಮುಂದೆ ಎರಡು ಆಫರ್‌ ಗಳನ್ನ ಮುಂದಿಟ್ಟು ಕಾಂಗ್ರೆಸ್‌ ಗೆ ಕರೆತರುವ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ದೃಷ್ಠಿಯಿಂದ ಮೂಲ ಕಾಂಗ್ರೆಸ್ಸಿಗರನ್ನ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್‌ ನೀಡುವ ಚಿಂತನೆ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+