ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು; ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ ಎಂದ ಎಸ್‌ ಟಿ ಸೋಮಶೇಖರ್‌

ಬೆಂಗಳೂರು, ನವೆಂಬರ್‌ 09: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದ್ದು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಮಾಜಿ ಸಚಿವ ಎಸ್‌ ಟಿ ಸೋಮಶೇಖರ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ನನ್ನನ್ನು ಪಕ್ಷದಿಂದ ಬಿಟ್ಟು ಹೋಗಲಿ ಅಂತ ಹೇಳಲು ಈಶ್ವರಪ್ಪ ಯಾರು? ಎಂದು ಮಾಜಿ ಸಚಿವ ಎಸ್‌ ಟಿ ಸೋಮಶೇಖರ್‌ ಪ್ರಶ್ನಿಸಿದ್ದಾರೆ.

ST Somashekar Lashed Out At KS Eshwarappa

ಕೆ ಎಸ್‌ ಈಶ್ವರಪ್ಪ ಏನು ರಾಜ್ಯಾಧ್ಯಕ್ಷನಾ? ಈಶ್ವರಪ್ಪನನ್ನು ನಂಬಿ ನಾನು ಪಕ್ಷಕ್ಕೆ ಬರಲಿಲ್ಲ. ನಾನು ಯಡಿಯೂರಪ್ಪರನ್ನು ನಂಬಿ ಪಕ್ಷಕ್ಕೆ ಬಂದಿದ್ದೇನೆ, ಇಷ್ಟೆಲ್ಲಾ ಬೆಳವಣಿಗೆಗಳಾದ ಮೇಲೆ ನಾನು ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ‌. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಟ್ಟು ಪಕ್ಷದಲ್ಲಿದ್ದೇನೆ‌. ಈಗ ಯಾರೋ 5 ಜನರು ಮಾತನಾಡುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಈಶ್ವರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಸಿದ್ದಾರೆ.

ಎಸ್ ಟಿ ಸೋಮಶೇಖರ್ ಬೆಂಬಲಿಗರು ಮಾತ್ರ ಪಕ್ಷ ಬಿಟ್ಟಿಲ್ಲ. ಅಶೋಕ್ ಕ್ಷೇತ್ರದಲ್ಲಿ ಪಕ್ಷ ಬಿಟ್ಟು ಹೋಗಿಲ್ವಾ? ಮುನಿರತ್ನ ಕ್ಷೇತ್ರದಲ್ಲಿ ಹೋಗಿಲ್ವಾ?. ದಾಸರಹಳ್ಳಿ, ಕೆ ಆರ್ ಪುರಂ ಕ್ಷೇತ್ರದಲ್ಲಿ ಹೋಗಿಲ್ವಾ? ಕೇವಲ ನನ್ನನ್ನೇ ಏಕೆ ಟಾರ್ಗೆಟ್ ಮಾಡುತ್ತೀರಾ? ಕ್ಷೇತ್ರದಲ್ಲಿ ಸಾವಿರ ಜನ ಲೀಡರ್ ಇರುತ್ತಾರೆ, ಚುನಾವಣೆ ಸಂಧರ್ಭದಲ್ಲಿ ಆ ಕಡೆ ಈ ಕಡೆ ಹೋಗುತ್ತಾರೆ. ಇದಕ್ಕೆ ಹೆಚ್ಚು ಮಹತ್ವ ನೀಡುವುದು ಬೇಡ ಎಂದು ಹೇಳಿದ್ದಾರೆ,

ನಾನು ಬಿಜೆಪಿ ಪಕ್ಷ ಬಿಟ್ಟು ಹೋಗುವುದಿಲ್ಲ. ನಾನು ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲೇ ಇದ್ದೇನೆ, ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದೆಲ್ಲಾ ಊಹಾಪೋಹ. ನಾನು ಯಡಿಯೂರಪ್ಪನವರ ಮಾತು ನಂಬಿ ಬಿಜೆಪಿಯಲ್ಲಿದ್ದೇ‌ನೆ. ಆದರೆ, ಕೆಲವರು ನನ್ನನ್ನು ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ.

ST Somashekar Lashed Out At KS Eshwarappa

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದಾಗ ನನ್ನನ್ನು ಯಡಿಯೂರಪ್ಪ ಉಳಿಸಿಕೊಂಡರು. ಯಡಿಯೂರಪ್ಪನವರ ವಿರುದ್ಧ ಐದಾರು ಜನ ಮಾತನಾಡಿದರು, ಅವರ ವಿರುದ್ಧ ಪಕ್ಷ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನಡೆಗೆ ಕಾರಣವಾಯಿತು. ಯಡಿಯೂರಪ್ಪರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಆಕ್ರೋಶ ವ್ಯಕ್ತಪಸಿದರು. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು, ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು. ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ.

ನನ್ನನ್ನು ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ. ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇ‌ನೆ, ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ, ಇದರಲ್ಲಿ ತಪ್ಪೇನಿದೆ? ಎಂದು ಎಸ್‌ ಟಿ ಸೋಮಶೇಖರ್‌ ಪ್ರಶ್ನಿಸಿದ್ದಾರೆ.

ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ.ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ, ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲಾ ಕಾಂಗ್ರೆಸ್ ನ ಗ್ಯಾರಂಟಿ, ಅದಕ್ಕೆ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಅರೇ ಸರ್ಕಾರ ಯಾವುದಾದರೂ ಇರಲಿ, ಜನಕ್ಕೆ ಒಳ್ಳೆಯದು ಮಾಡುವುದು ಬೇಡವೇ? ಎಂದು ಎಸ್‌ ಟಿ ಸೋಮಶೇಖರ್‌ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+