ಕಾಂಗ್ರೆಸ್ ಗೆ ಹೋಗ್ತಾರಾ ಎಸ್ ಟಿ ಸೋಮಶೇಖರ್? ಕಾಂಗ್ರೆಸ್ ಕೊಟ್ಟ ಎರಡು ಆಫರ್ ಏನು ಗೊತ್ತಾ?
ಬೆಂಗಳೂರು, ಜುಲೈ 06: ರಾಜ್ಯ ರಾಜಕಾರಣದಲ್ಲಿ ಗುರು ಶಿಷ್ಯರ ಗುಪ್ತಗಾಮಿನಿಯ ಚರ್ಚೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ಸೆರ್ಪಡೆಯಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದರು.
ಮೂರು ವರ್ಷಗಳ ಕಾಲ ಆಡಳಿತ ನಡೆಸಿದದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದು, ಇತ್ತ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಚನೆಯಾಗಿದೆ. ಬಿಜೆಪಿ ಪಕ್ಷಕ್ಕೆ ಹೋದ ಕಾಂಗ್ರೆಸ್ ನಾಯಕರು ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಮಾಜಿ ಸಚಿವರುಗಳಾದ ಎಸ್ ಟಿ ಸೋಮಶೇಖರ್ ಹಾಗೂ ಎಂ ಟಿ ಬಿ ನಾಗರಾಜ್ ಹಾಡಿಹೊಗಳಿದ್ದು, ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಿಷ್ಯನಾದ ಎಸ್ ಟಿ ಸೋಮಶೇಖರ್ ಅವರ ಹೆಗಲ ಮೇಲೆ ಕೈ ಹಾಕಿ ಗುಪ್ತವಾಗಿ ಮಾತನಾಡಿದ್ದು, ಸಿದ್ದರಾಮಯ್ಯ ನುಡಿದಂತೆ ನಡೆಯುವ ರಾಜಕಾರಣಿ. 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಈ ಹಿಂದೆ ಸಿದ್ದರಾಮಯ್ಯ ವಿರುದ್ದವೇ ಶಿಷ್ಯದಿರು ತಿರುಗಿ ಬಿದ್ದಿದ್ದು, ನಾವು ಪಕ್ಷ ಬಿಡಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಸಿದ್ದರಾಮಯ್ಯ ಅವರ ವಿರುದ್ದ ಬಾಂಬೆ ಬಾಯ್ಸ್ ಗುಡುಗಿದ್ರು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಹಾಡಿಹೊಗಳಿರುವುದನ್ನ ನೋಡಿದ್ರೆ, ಮತ್ತೆ ಮರಳಿ ಕಾಂಗ್ರೆಸ್ ಪಕ್ಷ ಬರ್ತಾರಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.
ಇತ್ತ ಲೋಕಸಭಾ ಚುನಾವಣೆ ಗೆ ತಯಾರಿ ನಡೆಸಿಸರುವ ಕಾಂಗ್ರೆಸ್ ನಾಯಕರು, 20 ಸ್ಥಾನಗಳನ್ನಗೆಲ್ಲುವ ಗುರಿಯನ್ನ ಹಾಕಿಕೊಂಡಿದೆ. ಹೀಗಾಗಿ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ. ಹೌದು, ಮಾಜಿ ಸಚಿವರಾಗಿರುವ ಎಸ್ ಟಿ ಸೋಮಶೇಖರ್ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಇನ್ನೂ ಎಸ್ ಟಿ ಸೋಮಶೇಖರ್ ಅವರನ್ನ ಕಾಂಗ್ರೆಸ್ ಕರೆತರುವ ಪ್ರಯತ್ನ ನಡೆದಿದ್ದು, ಎರಡು ಆಫರ್ ಗಳನ್ನ ಮುಂದಿಟ್ಟು ಕಾಂಗ್ರೆಸ್ ಗೆ ಕರೆತರುವ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ದೃಷ್ಠಿಯಿಂದ ಮೂಲ ಕಾಂಗ್ರೆಸ್ಸಿಗರನ್ನ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡುವ ಚಿಂತನೆ ನಡೆದಿದ್ದು, ಯಶವಂತಪುರ ಕ್ಷೇತ್ರಕ್ಕೆ ಎಸ್ ಟಿ ಸೋಮಶೇಖರ್ ಪುತ್ರನಿಗೆ ಟಿಕೆಟ್ ನೀಡುವ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಇತ್ತ ಕಾಂಗ್ರೆಸ್ ಕೊಟ್ಟ ಆಫರ್ ಗೆ ಎಸ್ ಟಿ ಸೋಮಶೇಖರ್ ಒಪ್ಪಿಗೆ ನೀಡಿದ್ದಾರಾ ಇಲ್ವಾ ಎಂಬುದು ಪ್ರಶ್ನೆಯಾಗಿದ್ದು, ಲೋಕಸಭಾ ಚುನಾವಣಾ ಕಾವು ಜೋರಾಗುತ್ತಿದ್ದಂತೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ.












Click it and Unblock the Notifications