‘ಅಪರೇಷನ್ ಹಸ್ತ’ದ ಚರ್ಚೆ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್‌ಗೆ ಸರ್ಕಾರದಿಂದ ಬಂಪರ್ ಗಿಫ್ಟ್ !
ಬೆಂಗಳೂರು, ಆಗಸ್ಟ್ 22: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.
ಹೌದು, ಈಗಾಗಲೇ ಬಿಜೆಪಿಯಲ್ಲಿ ಎಸ್ ಟಿ ಸೋಮಶೇಖರ್ ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದರು.

ಇನ್ನೂ ಕಾಂಗ್ರೆಸ್ ನ ಆಪರೇಷನ್ ಹಸ್ತ ಬೆನ್ನಲ್ಲೇ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ. ಎಸ್.ಟಿ.ಸೋಮಶೇಖರ್ ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ನೀಡಲಾಗಿದೆ.
ಇನ್ನೂ ಯಶವಂತಪುರ ವಿಧಾನಸಭಾ ಕ್ಷೇತ್ರ ಕುಡಿಯುವ ನೀರಿಗೆ 7.63 ಕೋಟಿ ರೂ. ಬಿಬಿಎಂಪಿಯಿಂದ ಅನುದಾನ ಮಂಜೂರಿನ ಆದೇಶ ಬಂದಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ. 1.63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂ. ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ ಕ್ಷೇತ್ರದ ಅಭಿವೃದ್ದಿ ವಿಚಾರವಾಗಿ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿರುವ ಎಸ್ ಟಿ ಸೋಮಶೇಖರ್ ಕ್ಷೇತ್ರದ ಅನುದಾನ ವಿಚಾರವಾಗಿ ಚರ್ಚಿಸಿದ್ದಾರೆ. ಈ ವೇಳೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನೂ 7.63 ಕೋಟಿ ರೂ. ಅನುದಾನ ನೀಡಿ ಎಸ್.ಟಿ. ಸೋಮಶೇಖರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಡಿ.ಕೆ. ಶಿವಕುಮಾರ್ ಮಾಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತದೆ.












Click it and Unblock the Notifications