ಬಿಜೆಪಿ ಸಭಾತ್ಯಾಗ ಮಾಡಿದರೂ ಸದನದಲ್ಲೇ ಕೂತ ಎಸ್‌ ಟಿ ಸೋಮಶೇಖರ್:‌ ಇದು ಕಾಂಗ್ರೆಸ್‌ ಸೇರುವ ಮುನ್ಸೂಚನೆಯೇ?

ಬೆಳಗಾವಿ, ಡಿಸೆಂಬರ್‌ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯದ ಪರವಾಗಿ ನೀಡಿದ ಹೇಳಿಕೆಯನ್ನ ಹಿಂದೆ ಪಡೆಯ ಬೇಕು ಎಂದು ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಆಗ್ರಹಿಸಿ ಬಿಜೆಪಿ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ರು, ಆದರೆ, ಬಿಜೆಪಿಯ ಶಾಸಕ ಎಸ್‌ ಟಿ ಸೋಮಶೇಖರ್‌ ಮಾತ್ರ ಸದನದಲ್ಲೇ ಕುಳಿತಿದ್ದು, ಎಲ್ಲಾರ ಗಮನ ಸೆಳೆದಿದೆ.

ಹೌದು, ಈಗಾಗಲೇ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ನಾಯಕರಿಂದ ಹಾಗೂ ಪಕ್ಷದಿಂದ ಅಂತರವನ್ನ ಕಾಯ್ದುಕೊಂಡಿರುವ ಎಸ್‌ ಟಿ ಸೋಮಶೇಖರ್‌ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದ್ದು, ಇದೀಗ ಎಸ್‌ ಟಿ ಸೋಮಶೇಖರ್‌ ಒಂಟಿಯಾಗಿ ಸದನದಲ್ಲಿ ಕುಳಿತಿದ್ದು, ಕಾಂಗ್ರೆಸ್‌ ಸೇರುವ ಮುನ್ಸೂಚನೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ST Somashekar Remains in Assembly Even though All BJP MLA Left: Hinting at a Party Switch?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಮುಸ್ಲಿಂ ಪರ ಹೇಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಸಭಾತ್ಯಾಗಕ್ಕೆ ಮುಂದಾದ ವೇಳೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷರ ಬಿ.ವೈ.ವಿಜಯೇಂದ್ರ ಹಾಗೂ ಇನ್ನೂ ಹಲವು ಸದಸ್ಯರು ಸದನದಿಂದ ಹೊರಗೆ ಹೋಗೋಣ ಬನ್ನಿ ಎಂದು ಕರೆದರೂ ಎಸ್‌.ಟಿ.ಸೋಮಶೇಖರ್‌ ತಮ್ಮ ಆಸನದಿಂದ ಏಳಲಿಲ್ಲ. ನೀವು ಹೋಗಿ ನಾನು ಬರೋದಿಲ್ಲ ಎನ್ನುವ ಮೂಲಕ ಬಿಜೆಪಿ ಸದಸ್ಯರಿಗೆ ಸದನದಲ್ಲೇ ಮುಜುಗರವನ್ನುಂಟು ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಅಭಿವೃದ್ಧಿ 10 ಸಾವಿರ ಕೋಟಿ: ವಿಪಕ್ಷಗಳು ಕಿಡಿ

ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಅನುದಾನ ನೀಡುವುದಾಗಿ ಸಮಾವೇಶವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರವೂ ಸದನದಲ್ಲಿ ತೀವ್ರ ವಾಕ್ಸಮರ ಕಾರಣವಾಗಿದೆ. ಇದೇ ವೇಳೆ ಆಡಳಿತ ಪಕ್ಷದ ಸದಸ್ಯರ ವಿರುದ್ಧ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ 'ತಾಕತ್‌' ಪದ ಬಳಕೆ ಮಾಡಿದ್ದು ಇನ್ನಷ್ಟು ಕೋಲಾಹಲಕ್ಕೆ ಕಾರಣವಾಯಿತು. ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅವರ ಹೇಳಿಕೆ ಬಗ್ಗೆ ಸಚಿವರು ಸಮರ್ಥನೆ ನೀಡಿದರು. ಆದರೆ, ಇದಕ್ಕೆ ಬಗ್ಗದ ಬಿಜೆಪಿ ಸದಸ್ಯರು ಸದನದಿಂದ ಸಭಾತ್ಯಾಗ ಮಾಡಿದರು.

ಬಿಎಂಟಿಸಿಗೆ ಮಾರ್ಚ್ ಅಂತ್ಯಕ್ಕೆ 921 ಎಲೆಕ್ಟ್ರಿಕ್ ಬಸ್: ರಾಮಲಿಂಗಾರೆಡ್ಡಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2024ರ ಮಾರ್ಚ ಅಂತ್ಯಕ್ಕೆ 921 ಎಲೆಕ್ಟಿçಕಲ್ ಬಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದುವರೆಗೆ ಸ್ಮಾರ್ಟ್ಸಿಟಿ ಯೋಜನೆಯಡಿ ಒಟ್ಟು 90 ಎಲೆಕ್ಟಿçಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ.

ST Somashekar Remains in Assembly Even though All BJP MLA Left: Hinting at a Party Switch?

ಬಿಎಂಸಿಟಿಸಿಯಿಂದ ಪ್ರಸ್ತುತ ಈಗ ಒಟ್ಟು 15 ಬಸ್ ಘಟಕ/ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟಿçಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು ಬಿಎಂಟಿಸಿಗೆ 150 ಕೋಟಿ ರೂ.ಗಳ ಅನುದಾನ ನೀಡಿದೆ ಎಂದು ಸಚಿವರು ತಿಳಿಸಿದರು.

ಸ್ತ್ರೀ ಶಕ್ತಿ ಯೋಜನೆ ಜಾರಿಯ ಬಗ್ಗೆ ಕೆ.ಎಸ್.ನವೀನ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಕ್ತಿ ಯೋಜನೆಯು ಜಾರಿಯಾದ ನಂತರ ರಾಜ್ಯದ ರಸ್ತೆ ಸಾರಿಗೆ ನಿಗಮಗಳಲ್ಲಿ ಆದಾಯ ಹೆಚ್ಚಳವಾಗಿದೆ. ಶಕ್ತಿ ಯೋಜನೆ ಜಾರಿಯ ನಂತರ ಪ್ರತಿದಿನದ ಸರಾಸರಿಯ ಆದಾಯವು 2023-24ನೇ ಸಾಲಿನಲ್ಲಿ ಕ.ರಾ.ರ.ಸಾರಿಗೆ ನಿಗಮದಲ್ಲಿ 12.57 ಕೋಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 5.39 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 6.60 ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 5.92 ಕೋಟಿ ರೂ.ನಷ್ಟು ಆಗಿರುತ್ತದೆ ಎಂದು ತಿಳಿಸಿದರು.

ಶಕ್ತಿ ಯೋಜನೆ ಜಾರಿಯ ನಂತರ 108 ಕೋಟಿಗೂ ಆಧಿಕ ಜನರು ಈ ಯೋಜನೆಯ ಪ್ರಯೋಜನ ಪಡೆದಿದ್ದು, ಪ್ರತಿದಿನ 1.5 ಕೋಟಿ ಮಹಿಳೆಯರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಮತ್ತೀಗ ಹೊಸದಾಗಿ 5,500 ಹೊಸ ಬಸ್‌ಗಳ ಖರೀದಿಗೆ ಅನುಮತಿ ನೀಡಿದ್ದು, 9000 ಸಿಬ್ಬಂದಿಯ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+