Get Updates
Get notified of breaking news, exclusive insights, and must-see stories!

ಹಾಸ್ಟೆಲ್‌ನಲ್ಲಿ ಸಿಬ್ಬಂದಿ ಕೊರತೆ: ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

ಬೆಂಗಳೂರು, ಡಿಸೆಂಬರ್ 15: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಯ ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿ ಕೊರತೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಆ ಕುರಿತು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಮರಾಠಿ ಪತ್ರಿಕಯೊಂದರಲ್ಲಿ ಪ್ರಕಟವಾದ ವರದಿ ಆಧರಿಸಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿರುವ ಸ್ವಯಂ ಪ್ರೇರಿತ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Staff Shortage In Hostels HC Takes Up Suo Moto Case Notice To Government

ಬಳಿಕ ನ್ಯಾಯಾಲಯ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು. ರಾಜ್ಯ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಜರಾಗಿ, ಪ್ರಕರಣದ ಕುರಿತು ಗಮನ ಹರಿಸಲಾಗುವುದು. ಮುಂದಿನ ವಿಚಾರಣೆ ವೇಳೆ ವಸ್ತುಸ್ಥಿತಿ ವರದಿ ಸಲ್ಲಿಸಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಅಲ್ಲದೆ, ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ನೆರವು ಹಾಗೂ ಸಲಹೆ ನೀಡಲು ಮಾಜಿ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ನಿತಿನ್‌ ರಮೇಶ್‌ ಅವರನ್ನು ಅಮಿಕಸ್‌ ಕ್ಯೂರಿ ಆಗಿ ನ್ಯಾಯಪೀಠ ನೇಮಕ ಮಾಡಿತು. ಅವರಿಗೆ ಪ್ರಕರಣದ ಕುರಿತ ಅರ್ಜಿಯ ಪ್ರತಿ ಹಾಗೂ ಇತರೆ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ರಿಜಿಸ್ಟ್ರಿಗೆ ಸೂಚಿಸಿತು.

ಹೈಕೋರ್ಟ್ ಹೇಳಿದ್ದೇನು?; ಪರಿಶಿಷ್ಟ ಜಾತಿಯ ಬಾಲಕಿಯರ ಮತ್ತು ಬಾಲಕರ ಹಾಸ್ಟೆಲ್‌ನಲ್ಲಿ ಮಂಜೂರಾತಿಗೆ ಪ್ರಮಾಣಕ್ಕಿಂತ ಕಡಿಮೆ ಸಿಬ್ಬಂದಿ ಇದ್ದಾರೆ. ಕಾಲಕಾಲಕ್ಕೆ ಸಿಬ್ಬಂದಿಯ ನೇಮಕಾತಿ ನಡೆಯುತ್ತಿಲ್ಲ. ಕೆಲ ಜಿಲ್ಲೆಯಗಳಲ್ಲಿ ಮೂರು-ನಾಲ್ಕು ಹಾಸ್ಟೆಲ್‌ನಲ್ಲಿ ಓರ್ವ ವಾರ್ಡನ್ ಮತ್ತು ಅಧೀಕ್ಷಕರು ಇದ್ದಾರೆ. ಇದು ವಿದ್ಯಾರ್ಥಿಗಳ ಕಲಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪರೀಕ್ಷೆಯಲ್ಲಿ ಅವರ ಫಲಿತಾಂಶ ಪ್ರಮಾಣ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ, ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಳ್ಳಲು ಇದು ಅರ್ಹ ಪ್ರಕರಣವಾಗಿದೆ ಎಂದು ಸಿಜೆ ಹೇಳಿದರು.

ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದಾಗಿ ಈಗಾಗಲೇ ಹೈಕೋರ್ಟ್‌ ನಿರ್ದೇಶಿಸಿದೆ. ಆಸ್ಟ್ರೇಲಿಯಾ ಮತ್ತು ಅಮೆರಿಕಾ ದೇಶದಲ್ಲಿ ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಕುರಿತಂತೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಅದರಂತೆ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದಾಗಿ ನಿಯಮಗಳು ಜಾರಿಯಲ್ಲಿವೆ. ಈ ನಿಯಮಗಳು ನಮ್ಮ ದೇಶದಲ್ಲಿ ಇಲ್ಲ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಹೇಳಿದರು.

ಪ್ರಕರಣದ ಹಿನ್ನೆಲೆ: 2023ರ ಡಿಸೆಂಬರ್ 7ರಂದು ಮರಾಠಿ ಪತ್ರಿಕೆ 'ತರುಣ್‌ ಭಾರತ್‌' ಪತ್ರಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ಪರಿಶಿಷ್ಟ ಜಾತಿಯ ಬಾಲಕಿಯರ ಮತ್ತು ಬಾಲಕರ ಹಾಸ್ಟೆಲ್‌ನಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ಇಲ್ಲ. ಸಿಬ್ಬಂದಿಯ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿ ಇದ್ದರೂ ನೇಮಕಾತಿ ಮಾಡಿಲ್ಲ. ಕೆಲವೊಂದು ಜಿಲ್ಲೆಗಳಲ್ಲಿ 3-4 ಹಾಸ್ಟೆಲ್‌ಗಳಲ್ಲಿ ಕೇವಲ ಒಬ್ಬ ವಾರ್ಡನ್‌ ಇದ್ದಾರೆ. ರಾಜ್ಯದಲ್ಲಿ 1,297 ಪ್ರಿ ಮೆಟ್ರಿಕ್‌ ಹಾಸ್ಟೆಲ್‌ಗಳು ಇವೆ. 1,165 ಪೋಸ್ಟ್‌ ಮೆಟ್ರಿಕ್‌ ಹಾಸ್ಟೆಲ್‌ಗಳಿವೆ. ಆದರೆ, ವಾರ್ಡನ್‌ ಮತ್ತು ಅಧೀಕ್ಷಕರು 1,200ಕ್ಕಿಂತ ಕಡಿಮೆಯಿದ್ದಾರೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ತಿಳಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+