• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

14 ಕ್ಷೇತ್ರದ ಚುನಾವಣೆಗೆ ವೇದಿಕೆ ಸಿದ್ಧ, ತಪ್ಪದೇ ಮತ ಹಾಕಿ

|

ಬೆಂಗಳೂರು, ಏಪ್ರಿಲ್ 17 : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. 14 ಕ್ಷೇತ್ರಗಳಲ್ಲಿ 2,67,51,893 ಜನರು ಮತ ಚಲಾಯಿಸುವ ಅರ್ಹತೆ ಪಡೆದಿದ್ದಾರೆ.

ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಮತದಾನದ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಜನರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಹೇಗೆ?

'14 ಲೋಕಸಭಾ ಕ್ಷೇತ್ರಗಳಲ್ಲಿ 2,67,51,893 ಜನರು ಮತದಾನ ಮಾಡಲು ಅರ್ಹತೆ ಪಡೆದಿದ್ದಾರೆ. 30,164 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ' ಎಂದು ಸಂಜೀವ್ ಕುಮಾರ್ ಹೇಳಿದರು.

ಮತದಾನಕ್ಕೆ ಮುನ್ನಾ ಮತಗಟ್ಟೆಯಲ್ಲಿ ನಡೆಯುವ ಪ್ರಕ್ರಿಯೆಗಳೇನು?

'ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಮುಂತಾದ ಮೂಲಭೂತ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಂಗವಿಕಲರು ಬಂದು ಮತದಾನ ಮಾಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ' ಎಂದು ಸಂಜೀವ್ ಕುಮಾರ್ ವಿವರಣೆ ನೀಡಿದರು.

ಮತದಾನ ನಡೆಯುವ ಕ್ಷೇತ್ರಗಳು : ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಉಡುಪಿ-ಚಿಕ್ಕಮಗಳೂರು, ಮೈಸೂರು-ಕೊಡಗು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ

ಪ್ರಮುಖ ಅಂಶಗಳು

* 14 ಲೋಕಸಭಾ ಕ್ಷೇತ್ರಗಳು

* 2,67,51,893 ಒಟ್ಟು ಮತದಾರರು

* 1,35,45,818 ಪುರುಷರು

* 1.32,03,258 ಮಹಿಳೆಯರು

* 2,817 ಇತರ ಮತದಾರರು

* 241 ಒಟ್ಟು ಅಭ್ಯರ್ಥಿಗಳು (226 ಪುರುಷ, 15 ಮಹಿಳೆ)

* ಹೆಚ್ಚು ಅಭ್ಯರ್ಥಿಗಳು ಬೆಂಗಳೂರು ಉತ್ತರ (31)

* ಕಡಿಮೆ ಅಭ್ಯರ್ಥಿಗಳು ಹಾಸನ (6)

ಚುನಾವಣಾ ಕಣದಲ್ಲಿರುವ ಪ್ರಮುಖ ನಾಯಕರು

* ಎಚ್.ಡಿ.ದೇವೇಗೌಡ (ತುಮಕೂರು)

* ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ)

* ಕೃಷ್ಣ ಬೈರೇಗೌಡ (ಬೆಂಗಳೂರು ಉತ್ತರ)

* ನಿಖಿಲ್ ಕುಮಾರಸ್ವಾಮಿ (ಮಂಡ್ಯ)

* ಸುಮಲತಾ (ಮಂಡ್ಯ)

* ಪ್ರಜ್ವಲ್ ರೇವಣ್ಣ ( ಹಾಸನ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Electoral Officer Sanjeev Kumar said that election commission all set for first phase of Lok Sabha election 2019 in Karnataka. Voting will be held on April 18. People can vote from morning 7 to 6 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more