ಶನಿವಾರ 15 ಜಿಲ್ಲೆಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 19 : ಎರಡನೇ ಹಂತದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧವಾಗಿದೆ. ಫೆಬ್ರವರಿ 20ರ ಶನಿವಾರ 15 ಜಿಲ್ಲೆಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ.

531 ಜಿಲ್ಲಾ ಪಂಚಾಯಿತಿ ಮತ್ತು 1,939 ತಾಲೂಕು ಪಂಚಾಯಿತಿಯ ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆಯಲಿದೆ. 15 ಜಿಲ್ಲೆಗಳಲ್ಲಿ ಮತದಾನಕ್ಕಾಗಿ 17,698 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 1.42 ಕೋಟಿ ಮತದಾರರು ಮತ ಚಲಾವಣೆ ಮಾಡುವ ಹಕ್ಕು ಹೊಂದಿದ್ದಾರೆ. [ಮೈಸೂರು ಜಿಲ್ಲಾ ಪಂಚಾಯತ್ ಕಣದಲ್ಲಿ ಮಂಡ್ಯದ ಟೆಕ್ಕಿ]

election

ಎಲ್ಲೆಲ್ಲಿ ಚುನಾವಣೆ? : ಶನಿವಾರ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೀದರ್, ಬಳ್ಳಾರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಚುನಾವಣೆ ನಡೆಯುತ್ತಿದೆ. [ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ವಿವರಗಳು]

17,698 ಮತಗಟ್ಟೆಗಳ ಪೈಕಿ 3626 ಅತಿ ಸೂಕ್ಷ್ಮ ಮತ್ತು 4097 ಸೂಕ್ಷ್ಮ ಮತಗಟ್ಟೆಗಳಾಗಿವೆ. ನಕ್ಸಲ್ ಪೀಡಿತ ಮತ್ತು ಗಡಿಭಾಗದ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು, ಭದ್ರತೆಗಾಗಿ ಕೇಂದ್ರಿಯ ಮೀಸಲು ಪೊಲೀಸ್ ಪಡೆಯನ್ನು ನಿಯೋಜನೆ ಮಾಡಲಾಗಿದೆ. [ಚುನಾವಣೆ : ಉಡುಪಿ, ಮಂಗಳೂರಿನಲ್ಲಿ ಬಿಗಿ ಭದ್ರತೆ]

ಮತದಾರರು : 70,72,923 ಮಹಿಳೆಯರು ಮತ್ತು 72,21,522 ಪುರುಷರು ಸೇರಿದಂತೆ 1,42,74,895 ಮತದಾರರು ಶನಿವಾರ ಚುನಾವಣೆಯಲ್ಲಿ ಮತ ಚಲಾವಣೆ ಮಾಡುವ ಹಕ್ಕನ್ನು ಹೊಂದಿದ್ದಾರೆ. ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Stage is set for second phase of Taluk and Zilla panchayat election 2016. Election will be held on Saturday, February 20th at 15 districts of Karnataka.
Please Wait while comments are loading...