ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಮನಿಸಿ: ಮುಖ್ಯಮಂತ್ರಿಗಳ ಇ-ಮೇಲ್ ಬದಲಾವಣೆ!

|
Google Oneindia Kannada News

ಬೆಂಗಳೂರು, ಡಿಸೆಂಬರ್ 28: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

Starting from January 1, 2021 , you can send complaint/mail directly to CMs email id

Recommended Video

ಇಟಲಿಗೆ ಹೋಗ್ತಿರೋದಾದ್ರು ಯಾಕೆ ?? | Rahul Gandhi | Oneindia Kannada

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The e-mail ID cm.kar@nic.in will be used from January 1, 2021 for submission and communication to the Chief Minister's Office, the Ministry of Home Affairs said. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X