Get Updates
Get notified of breaking news, exclusive insights, and must-see stories!

ರೈತರಿಗೆ ಗುಡ್ ನ್ಯೂಸ್‌: ಕೃಷಿ ಇಲಾಖೆ ಮಹತ್ವದ ಆದೇಶ

ಬೆಂಗಳೂರು, ಏಪ್ರಿಲ್‌ 03: ರೈತರಿಗೆ ಕೃಷಿ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು, ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

State Agriculture Department Gives Good News To Farmers

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿಲಿಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದ್ದ 9 ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PM-RKVY) ಎಂದು ಮರು ನಾಮಕರಣಗೊಳಿಸಿ ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ವ್ಯಾಪ್ತಿಗೆ ಒಳಪಡುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ PMKSI ಮತ್ತು PMMS ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ ರೂ.274 ಕೋಟಿ ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಇದರ ಅನುಕೂಲ ತಲುಪಲಿದೆ. ಹಾಗೆಯೇ ಟಾಪ್ಅಪ್ ಯೋಜನೆಯಡಿ ರೂ.252 ಕೋಟಿಗಳ ಅನುದಾನವನ್ನು ಸೂಕ್ಷ್ಮ ನೀರಾವರಿ ಸಾಧನ ಸಲಕರಣೆಗಳ ಆರ್ಥಿಕ ನೆರವಿಗಾಗಿ ನೀಡಲಾಗಿದೆ.

ರೈತರಿಗೆ ಉಚಿತ ರೊಬೊಟಿಕ್ ಶಸ್ತ್ರಚಿಕಿತ್ಸೆ

ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್‌ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ 'ಕಾವೇರಿ ಸಂಕಲ್ಪʼ ಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಇದೊಂದು ʻರೊಬೊಟಿಕ್ ಆಧರಿತ ಜಂಟಿ ಭರವಸೆಯ ಕಾರ್ಯಕ್ರಮʼವಾಗಿದೆ. ಇದರ ಅಡಿಯಲ್ಲಿ ಕರ್ನಾಟಕದಾದ್ಯಂತ ಆರ್ಥಿಕವಾಗಿ ಅರ್ಹ ರೈತರಿಗೆ 100 ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಮಾತನಾಡಿದ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು, ಈ ಉಪಕ್ರಮವನ್ನು ಶ್ಲಾಘಿಸಿದರು. " ಖಾಸಗಿ ಆಸ್ಪತ್ರೆ ಈ ರೀತಿಯಾಗಿ ಸಿಎಸ್ಆರ್ ಹಣವನ್ನು ಬಳಸುತ್ತಿರುವುದು ಸಂತೋಷ ತಂದಿದೆ. ರೈತರು ನಮ್ಮ ಆರ್ಥಿಕತೆಯ ಅಡಿಪಾಯವಾಗಿದ್ದಾರೆ. ಆದರೂ ಅವರ ಆರೋಗ್ಯವನ್ನು ಹೆಚ್ಚಾಗಿ ನಿರ್ಲಕ್ಷಿಸಲಾಗುತ್ತದೆ. ʻಕಾವೇರಿ ಸಂಕಲ್ಪʼದಂತಹ ಉಪಕ್ರಮಗಳು ನಮ್ಮೆಲ್ಲರ ಹೃತ್ಪೂರ್ವಕ ಬೆಂಬಲಕ್ಕೆ ಅರ್ಹವಾಗಿವೆ. ಇಂತಹ ಕಾರ್ಯಕ್ರಮಗಳು ನಿರ್ಣಾಯಕ ಆರೋಗ್ಯ ಅಂತರಗಳನ್ನು ಪರಿಹರಿಸುವುದಲ್ಲದೆ, ನಮ್ಮ ರೈತ ಸಮುದಾಯವನ್ನು ಅವರ ದೈಹಿಕ ಶಕ್ತಿ ಮತ್ತು ಘನತೆಯನ್ನು ಪುನಃಸ್ಥಾಪಿಸುವ ಮೂಲಕ ಸಬಲೀಕರಣಗೊಳಿಸುತ್ತವೆ,ʼʼ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+