ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವುದು ಕಡ್ಡಾಯ
ಬೆಂಗಳೂರು, ಆಗಸ್ಟ್ 13 : ಪಂಚಾಯತ್ ರಾಜ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಎಲ್ಲಾ ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಕಡ್ಡಾಯಗೊಳಿಸಲಾಗಿದೆ. ನಾಡಗೀತೆಯೊಂದಿಗೆ ಸಮಾರಂಭ ಆರಂಭಿಸಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಬೇಕಾಗಿದೆ.
ಕೆಲವು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನ ರಾಷ್ಟ್ರಧ್ವಜ ಹಾರಿಸಬೇಕು ಎಂದು ಆದೇಶಿಸಲಾಗಿತ್ತು. ಈಗ ಪಂಚಾಯಿತಿಯ ಸಭೆ, ಕಾರ್ಯಕ್ರಮಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆ ಕಡ್ಡಾಯಗೊಳಿಸಲಾಗಿದೆ. [ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ]

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಂಟಿ ಕಾರ್ಯದರ್ಶಿ ಕೆ.ಯಾಲಕ್ಕಿಗೌಡ ಅವರು ಆ.10ರಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೊಲೆ ಅನ್ವಯ ಇನ್ನು ಮುಂದೆ ರಾಜ್ಯದ 6,068 ಗ್ರಾಮ ಪಂಚಾಯಿತಿ, 176 ತಾಲೂಕು ಪಂಚಾಯಿತಿ ಮತ್ತು 30 ಜಿಲ್ಲಾ ಪಂಚಾಯಿತಿಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆ ಮೊಳಗಲಿದೆ.
ಎಚ್.ಕೆ.ಪಾಟೀಲ್ ಆದೇಶ : ನಾಡಗೀತೆ ಮತ್ತು ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಆದೇಶ ನೀಡಿದ್ದರು. ಈ ಆದೇಶದ ಅನ್ವಯವೇ ಸುತ್ತೋಲೆ ಹೊರಡಿಸಲಾಗಿದೆ.
ನಾಡಗೀತೆ : ಜಯ ಭಾರತ ಜನನಿಯ ತನುಜಾತೆ!












Click it and Unblock the Notifications