ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ ಹಾಡುವುದು ಕಡ್ಡಾಯ

|
Google Oneindia Kannada News

ಬೆಂಗಳೂರು, ಆಗಸ್ಟ್ 13 : ಪಂಚಾಯತ್ ರಾಜ್ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಎಲ್ಲಾ ಪಂಚಾಯಿತಿಗಳಲ್ಲಿ ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಕಡ್ಡಾಯಗೊಳಿಸಲಾಗಿದೆ. ನಾಡಗೀತೆಯೊಂದಿಗೆ ಸಮಾರಂಭ ಆರಂಭಿಸಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಬೇಕಾಗಿದೆ.

ಕೆಲವು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿದಿನ ರಾಷ್ಟ್ರಧ್ವಜ ಹಾರಿಸಬೇಕು ಎಂದು ಆದೇಶಿಸಲಾಗಿತ್ತು. ಈಗ ಪಂಚಾಯಿತಿಯ ಸಭೆ, ಕಾರ್ಯಕ್ರಮಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆ ಕಡ್ಡಾಯಗೊಳಿಸಲಾಗಿದೆ. [ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ]

national anthem

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಂಟಿ ಕಾರ್ಯದರ್ಶಿ ಕೆ.ಯಾಲಕ್ಕಿಗೌಡ ಅವರು ಆ.10ರಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೊಲೆ ಅನ್ವಯ ಇನ್ನು ಮುಂದೆ ರಾಜ್ಯದ 6,068 ಗ್ರಾಮ ಪಂಚಾಯಿತಿ, 176 ತಾಲೂಕು ಪಂಚಾಯಿತಿ ಮತ್ತು 30 ಜಿಲ್ಲಾ ಪಂಚಾಯಿತಿಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆ ಮೊಳಗಲಿದೆ.

ಎಚ್.ಕೆ.ಪಾಟೀಲ್ ಆದೇಶ : ನಾಡಗೀತೆ ಮತ್ತು ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಎಚ್‌.ಕೆ.ಪಾಟೀಲ್ ಆದೇಶ ನೀಡಿದ್ದರು. ಈ ಆದೇಶದ ಅನ್ವಯವೇ ಸುತ್ತೋಲೆ ಹೊರಡಿಸಲಾಗಿದೆ.

ನಾಡಗೀತೆ : ಜಯ ಭಾರತ ಜನನಿಯ ತನುಜಾತೆ!

English summary
State and National anthem anthem singing mandatory in Taluk panchayat, Zilla panchayat and Grama panchayat according to circular by the Rural Development and Panchayat Raj Department of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X