ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟನೆ ಕೊಟ್ಟ ವಿ ಸೋಮಣ್ಣ

ರಾಜ್ಯ ವಿಧಾನಸಭಾ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಇರುವ ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಅನುಮಾನಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜ್ಯ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ಆಂತರಿಕ ವಲಯದಲ್ಲಿ ಅಸಮಧಾನದ ಕಿಚ್ಚು ಹೆಚ್ಚಾದಂತೆ ತೋರುತ್ತಿದೆ. ಹೀಗಾಗಿ ಸಚಿವ ವಿ ಸೋಮಣ್ಣ ಬಿಜೆಪಿ ತೊರೆದು ಪುನ: ಕಾಂಗ್ರೆಸ್ ಸೇರುತ್ತಾರೆನ್ನುವ ಮಾತು ಕೇಳಿ ಬರುತ್ತಿದೆ. ಆದರೆ ಇದಕ್ಕೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಸಾಕಷ್ಟು ಕಸರತ್ತು ಮಾಡುತ್ತಿದೆ. ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತ ರೂಢ ಬಿಜೆಪಿ ಪಕ್ಷ ರಾಜ್ಯಾದ್ಯಂತ ಫುಲ್ ಆಕ್ಟವ್ ಆಗಿದೆ. ಆದರೆ ಪಕ್ಷದ ಹಿರಿಯ ನಾಯಕರಲ್ಲೇ ಇನ್ನಷ್ಟು ಮನಸ್ತಾಪ ಭುಗಿಲೆದ್ದಿದೆ.

ಇತ್ತ ಬಿಜೆಪಿ ಹೈಕಮಾಂಡ್ ನಾಯಕರನ್ನ ರಾಜ್ಯಕ್ಕೆ ಕರೆತರುವ ಮೂಲಕ ಚುನಾವಣಾ ಪ್ರಚಾರವನ್ನ ನಡೆಸುತ್ತಿದ್ರೆ ಇತ್ತ ಬಿಜೆಪಿಯ ಹಿರಿಯ ಲಿಂಗಾಯತ ನಾಯಕ ಹಾಗೂ ಸಚಿವ ವಿ.ಸೋಮಣ್ಣ ಬಿಜೆಪಿ ಪಕ್ಷವನ್ನ ಬಿಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ಹಲವು ನಾಯಕರಿಗೆ ಗಾಳ ಹಾಕಿದ್ದು, ಸೋಮಣ್ಣ ಅವರನ್ನ ಕಾಂಗ್ರೆಸ್ ಗೆ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನಲಾಗಿದೆ.

'ನಾನು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡಿಲ್ಲ'

'ನಾನು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡಿಲ್ಲ'

ಆದರೆ ಈ ಬಗ್ಗೆ ವಿಸೋಮಣ್ಣ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಮಾಡಿಲ್ಲ ಎಂದಿದ್ದಾರೆ. ಜಿಲ್ಲೆಯ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಹೋಗುತ್ತೇನೆ ಅಂತ ನಿಮ್ಮ ಬಳಿ ಬಂದು ಹೇಳಿದ್ದೇನಾ? ನಾನು ಕಾಂಗ್ರೆಸ್‌ಗೆ ಹೋಗುತ್ತೇನೆಂದು ಎಲ್ಲಾದರೂ ಹೇಳಿದ್ದೇನಾ? ಒಳ ಹಂತದಲ್ಲಿ ಕೆಲವೊಂದು ಚರ್ಚೆ ಆಗುತ್ತಿರುತ್ತವೆ. ಈ ಬಗ್ಗೆ ಹೆಚ್ಚು ಒತ್ತು ನೀಡಬೇಡಿ ಎಂದು ಮನವಿ ಮಾಡಿದರು.

ವಿಜಯಸಂಕಲ್ಪ ಯಾತ್ರೆಗೆ ಗೈರಾದ ಬಗ್ಗೆ ಸೋಮಣ್ಣ ಸ್ಪಷ್ಟನೆ

ವಿಜಯಸಂಕಲ್ಪ ಯಾತ್ರೆಗೆ ಗೈರಾದ ಬಗ್ಗೆ ಸೋಮಣ್ಣ ಸ್ಪಷ್ಟನೆ

ನನಗೆ ನನ್ನದೇ ಆದ ನಿಬಂಧನೆಗಳಿವೆ, ನನ್ನದೇ ಆದ ನಿರ್ಧಾರ, ಅನುಭವಗಳಿವೆ. ನಾನು ಹಳ್ಳಿಯಿಂದ ಬಂದವನು. ಸುಮಾರು 45 ವರ್ಷಗಳ ಕಾಲ ಮಣ್ಣು ಹೊತ್ತಿದ್ದೇನೆ. ಕೆಲಸವನ್ನು ದೇರಾಗಿ ನೋಡಿದ್ದೇನೆ. ನನಗೆ ಯಾಕೆ ಅಷ್ಟು ಧೈರ್ಯ ಅಂದರೆ ಒಂದು ಸಣ್ಣ ಅಪಚಾರ ಆಗಲು ಬಿಟ್ಟಿಲ್ಲ. ನಾನು ಬೆಂಗಳೂರಿಗೆ ಬಂದಿದ್ದು ಹೊಟ್ಟೆ ಪಾಡಿಗೆ. ಹೀಗಾಗಿ ನಮ್ಮ ಅನುಭವಕ್ಕೆ ತಕ್ಕಂತೆ ನೋವು ಇರುತ್ತದೆ. ಇದನ್ನು ಹೇಳಿಕೊಳ್ಳಲು ಆಗುತ್ತದೆಯಾ? ಮನಸ್ಸು, ಆರೋಗ್ಯ ಎರಡು ಸರಿ ಇಲ್ಲ ಕಾರಣ ನಾನು ಜಿಲ್ಲಾ ಉಸ್ತುವಾರಿಯಾಗಿರುವ ಚಾಮರಾಜನಗರದಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಗೆ ಹೋಗಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸೋಮಣ್ಣ ಆರ್ ಅಶೋಕ್ ನಡುವೆ ಜಟಾಪಟಿ

ಸೋಮಣ್ಣ ಆರ್ ಅಶೋಕ್ ನಡುವೆ ಜಟಾಪಟಿ

ಬೆಂಗಳೂರು ನಗರದ ನಾಗರಬಾವಿಯಿಂದ ನಾಯಂಡಹಳ್ಳಿವರೆಗೆ ರಥಯಾತ್ರೆ ನಿಗದಿಯಾಗಿತ್ತು. ಆದರೆ ನಾಯಂಡಹಳ್ಳಿವರೆಗೆ ರಥಯಾತ್ರೆಯಲ್ಲಿ ತೆರಳಲು ಅಶೋಕ್ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಸೋಮಣ್ಣ ಅರ್ಧಕ್ಕೆ ಯಾತ್ರೆ ಮೊಟಕುಗೊಳಿಸಿದ್ದಾರೆ. ಹಿಂದಿನಿಂದಲೂ ಸಹ ವಿ.ಸೋಮಣ್ಣ ಹಾಗೂ ಕಂದಾಯ ಸಚಿವ ಆರ್ ಅಶೋಕ್ ನಡುವೆ ಸಾಕಷ್ಟು ಜಟಾಪಟಿ ನಡೆದಿತ್ತು.

ಬೆಂಗಳೂರು ಜಿಲ್ಲಾ ಉಸ್ತುವಾರಿ ವಿಚಾರದಲ್ಲೂ ಈ ಇಬ್ಬರ ನಡುವೆ ಸಾಕಷ್ಟು ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಉಸ್ತುವಾರಿಯನ್ನ ಯಾರಿಗೆ ಕೊಡದೇ ತಮ್ಮ ಬಳಿಯಲ್ಲೇ ಇಟ್ಟುಕೊಳ್ಳುವ ಮೂಲಕ ಇಬ್ಬರ ನಡುವಿನ ಅಸಮಾಧಾನವನ್ನ ಶಮನಗೊಳಿಸಿದ್ರೂ ಇಬ್ಬರ ನಡುವೆ ಅಷ್ಟಾಗಿ ಸಮನ್ವಯತೆ ಕಂಡು ಬರಲಿಲ್ಲ.

ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದ ಸೋಮಣ್ಣ ನಡೆ

ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದ ಸೋಮಣ್ಣ ನಡೆ

ಇನ್ನು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದರು. ಆದರೆ ಜಿಲ್ಲೆಯ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಯಾತ್ರೆಗೆ ಗೈರಾಗಿದ್ದು ಎಲ್ಲರಲ್ಲಿ ಕುತೂಹಲ ಕೆರಳಿಸಿತ್ತು. ಸೋಮಣ್ಣ ಅವರ ಈ ನಡೆ ಹಲವು ಊಹಪೋಹಗಳಿಗೆ ಎಡೆ ಮಾಡಿಕೊಟ್ಟಿತ್ತು. ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯನ್ನ ಅರ್ಧಕ್ಕೆ ಬಿಟ್ಟು ಹೋಗಿರುವುದನ್ನ ನೋಡಿದ್ರೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಸದ್ಯ ಎಲ್ಲಾ ಪ್ರಶ್ನೆಗಳಿಗೆ ಅವರು ತೆರೆ ಎಳೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+