Karnataka assembly election 2023: ಎಐಎಂಐಎಂ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಐಎಂಐಎಂ ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಪ್ರಬಲ ಪಕ್ಷಗಳು ರಾಜ್ಯದಲ್ಲಿ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಜೊತೆಗೆ ಹಲವಾರು ಭರವಸೆಗಳೊಂದಿಗೆ ಮತದಾರರನ್ನು ಸೆಳೆಯುತ್ತಿವೆ. ಈ ನಡುವೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಐಎಂಐಎಂ ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮೂರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದಾರೆ. ಮೂವರು ಅಭ್ಯರ್ಥಿಗಳಲ್ಲಿ ಒಬ್ಬರು ಹಿಂದೂ ಮತ್ತು ಇನ್ನಿಬ್ಬರು ಮುಸ್ಲಿಮರಾಗಿದ್ದಾರೆ.

State Assembly Elections: AIMIM releases first list of candidates

ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸಿರುವ ಎಐಎಂಐಎಂ ಶೀಘ್ರದಲ್ಲೇ ಹೆಚ್ಚಿನ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಹೇಳಿದೆ. ಎಐಎಂಐಎಂ ಮೊದಲ ಪಟ್ಟಿಯ ಪ್ರಕಾರ, ಲತೀಫ್ಖಾನ್ ಅಮೀರ್ಖಾನ್ ಪಠಾಣ್ ಬೆಳಗಾವಿ ಉತ್ತರದಿಂದ, ದುರ್ಗಪ್ಪ ಕಾಶಪ್ಪ ಬಿಜವಾಡ ಹುಬ್ಬಳ್ಳಿ-ಧಾರವಾಡ ಪೂರ್ವದಿಂದ ಮತ್ತು ಅಲ್ಲಾಬಕ್ಷ್ ಮೆಹಬೂಬ್ ಸಾಬ್ ಬಿಜಾಪುರ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

State Assembly Elections: AIMIM releases first list of candidates

ಓವೈಸಿ ಅವರು ಕರ್ನಾಟಕ ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಪಕ್ಷದ ರಚನೆಯ ದಿನದ ವಾರ್ಷಿಕೋತ್ಸವದಲ್ಲಿ ಘೋಷಿಸಿದ್ದರು. ಎರಡು ರಾಜ್ಯಗಳಲ್ಲಿ ಚುನಾವಣೆಗೆ ಸಜ್ಜಾಗುವಂತೆ ಅವರು ತಮ್ಮ ಕಾರ್ಯಕರ್ತರನ್ನು ಕೇಳಿಕೊಂಡಿದ್ದರು. ಮುಂದೆ ಇವರು ಎರಡು ರಾಜ್ಯಗಳಲ್ಲಿ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+