ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಭಾನುವಾರ ಅಂತಿಮ: ಅರುಣ್ ಸಿಂಗ್

ಬೆಂಗಳೂರು, ಅ. 03: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಲ್ಲಿ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರಿಗೆ ಬಂದ ಬಳಿಕ ಮಾತನಾಡಿರುವ ರಾಜ್ಯ ಬಿಜೆಪಿ ಉಸ್ತವಾರಿ ಅರುಣ್ ಸಿಂಗ್, "ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಅಭ್ಯರ್ಥಿ ವಿಚಾರವಾಗಿ ಇವತ್ತು ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡುತ್ತೇವೆ. ಎರಡೂ ‌ಕ್ಷೇತ್ರಗಳಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ. ಹೀಗಾಗಿ ಎರಡು‌ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಈಗಾಗಲೇ ಎರಡು ಉಪ ಚುನಾವಣೆ ಸಿದ್ಧತೆ ನಾವು ಆರಂಭಿಸಿದ್ದೇವೆ" ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಟಿಕೆಟ್ ಪೈಪೋಟಿ ಬಗ್ಗೆಯೂ ಅರುಣ್ ಸಿಂಗ್ ಮಾತನಾಡಿದ್ದಾರೆ. "ಹಾನಗಲ್ ಕ್ಷೇತ್ರದಲ್ಲಿ ಶಿವಕುಮಾರ್ ಉದಾಸಿ‌ ಪತ್ನಿಗೆ ಟಿಕೆಟ್ ನೀಡುವ ವಿಚಾರವನ್ನು ಇವತ್ತು ಅಭ್ಯರ್ಥಿಗಳ ಬಗ್ಗೆ ರಾಜ್ಯ ಎಲೆಕ್ಷನ್ ಕಮಿಟಿಯಲ್ಲಿ ಚರ್ಚೆ ಮಾಡುತ್ತೇವೆ. ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ಮಾಡಲಾಗುತ್ತದೆ. ರಾಜ್ಯ ಚುನಾವಣೆ ಕಮಿಟಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಂದ್ರ ಚುನಾವಣಾ ಕಮಿಟಿಗೆ ಕಳುಹಿಸಿ ಕೊಡುತ್ತದೆ. ಯಾರು ಬಿಜೆಪಿ ಅಭ್ಯರ್ಥಿ ಅಂತ ಕೇಂದ್ರ ಚುನಾವಣೆ ಕಮಿಟಿ ಅಂತಿಮವಾಗಿ ಘೋಷಣೆ ಮಾಡುತ್ತದೆ" ಎಂದಿದ್ದಾರೆ.

State BJP in charge Arun Singh in Bengaluru to finalise bjp candidates for by election

ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೇಳುವ ಮೂಲಕ ಬೊಮ್ಮಾಯಿ ಸರ್ಕಾರಕ್ಕೆ ಪೂರ್ಣ ಅಂಕಗಳನ್ನು ಅರುಣ್ ಸಿಂಗ್ ಕೊಟ್ಟಿದ್ದಾರೆ. "ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಸರ್ಕಾರದ ಕೆಲಸಗಳನ್ನು ಪ್ರಚಾರ ಮಾಡುವ ನಿಟ್ಟಿನಲ್ಲಿಯೂ ಕೂಡ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ. ಸರ್ಕಾರದ ಯೋಜನೆಗಳು, ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರಚಾರ ಮಾಡುವ ಕೆಲಸ ಮಾಡುತ್ತೇವೆ. ಜೊತೆಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡುವ ನಿಟ್ಟಿನಲ್ಲಿ ಕೂಡ ಚರ್ಚೆ ನಡೆಯಲಿದೆ. ಮುಂದಿನಹಂತದಲ್ಲಿ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ" ಎಂದು ಅರುಣ್ ಸಿಂಗ್ ವಿವರಿಸಿದ್ದಾರೆ.

State BJP in charge Arun Singh in Bengaluru to finalise bjp candidates for by election

ಇನ್ನು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಅರುಣ್ ಸಿಂಗ್ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋರ್ ಕಮಿಟಿ ಸಭೆಗೆ ಬರುತ್ತಾರೆ. ಕೋರ್ ಕಮಿಟಿ ಸಭೆಯಲ್ಲಿ ಎಲ್ಲವಿಚಾರಗಳನ್ನು ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರವನ್ನು ಅಲ್ಲಿಯೇ ಚರ್ಚೆ ಮಾಡುತ್ತೇವೆ" ಎಂದಿದ್ದಾರೆ.

Recommended Video

      ಮಯಾಂಕ್ ಅರ್ಧ ಶತಕ ಬಾರಿಸಿದರೆ ತಂಡ ಸೋಲೋದು ಗ್ಯಾರಂಟಿಯ ಅಂತೆ!! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+