ಬಳಸಿ ಬಿಸಾಡುವ ಬಿಜೆಪಿ ಬಗ್ಗೆ ದಲಿತ ಸಮುದಾಯ ಜಾಗೃತವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 22: ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ, ರಾಜ್ಯದ ಬಿಜೆಪಿ ನಾಯಕರು ದಲಿತ ಗುರಾಣಿ ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. 'ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ' ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ ಎಂದು ಸಾಲು ಸಾಲು ಪ್ರಶ್ನೆಗಳನ್ನು ಬಿಜೆಪಿ ನಾಯಕರಿಗೆ ಕೇಳಿದ್ದಾರೆ.

State BJP Leaders Are Using The Name Of Dalit Community Says Karnataka CM Siddaramaiah

ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರ್ ಚಂದ್ ಗೆಹ್ಲೋಟ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ಪಂಜರದ ಗಿಣಿಯನ್ನಾಗಿ ಯಾಕೆ ಮಾಡಿದ್ದೀರಿ? ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ ಸೇರುವಷ್ಟು ವಯಸ್ಸಾಗದೇ ಇದ್ದರೂ, ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ?

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ?.

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ.

State BJP Leaders Are Using The Name Of Dalit Community Says Karnataka CM Siddaramaiah

ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ 'ಸಂಘಿ ಮನಸ್ಸು' ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ.

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರ್ ಚಂದ್ ಗೆಹ್ಲೋಟ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+