ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ ಕುರಿತು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ!

|
Google Oneindia Kannada News

ಬೆಂಗಳೂರು, ಜ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಆದ್ಯತೆ ಕೊಡುವ ಬಜೆಟ್‌ನ್ನು ಮಂಡಿಸಿದ್ದು, ಇದು ದೇಶವನ್ನು ವಿಶ್ವವಂದ್ಯವನ್ನಾಗಿ ಪರಿವರ್ತಿಸುವಲ್ಲಿ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಕೇಂದ್ರ ಬಜೆಟ್ 2021 ಕುರಿತು ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ಮತ್ತೆರಡು ಮೆಟ್ರೊ ಮಾರ್ಗ (2ಎ ಮತ್ತು 2ಬಿ) ನಿರ್ಮಾಣಕ್ಕೆ 14,788 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹತ್ವದ ಕ್ರಮವಾಗಿದೆ. ನಗರದ ವಾಹನ ದಟ್ಟಣೆ ನಿವಾರಿಸುವಲ್ಲಿ ಮತ್ತು ಬೆಂಗಳೂರಿಗೆ ಇನ್ನಷ್ಟು ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಸಂಬಂಧ ಲಸಿಕೆ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ. ರೈತರ ಆದಾಯ ದ್ವಿಗುಣಗೊಳಿಸಲು ದೂರದೃಷ್ಟಿಯ ಯೋಜನೆ, ಯುವಕರಿಗೆ ಉದ್ಯೋಗಾವಕಾಶ ಹೆಚ್ಚಳಕ್ಕೆ ವಿಶೇಷ ಯೋಜನೆ, ಆರೋಗ್ಯ ಕ್ಷೇತ್ರ ಬಲಪಡಿಸಲು 64,180 ಕೋಟಿ, 500 ಅಮೃತ್ ನಗರಗಳಲ್ಲಿ 2.86 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸುವುದು- ಇವೆಲ್ಲವೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

State BJP President Nalin Kumar Kateel Reaction to Union Budget 2021

ಆತ್ಮನಿರ್ಭರ ಭಾರತ ಮತ್ತು ವೈಯಕ್ತಿಕ ಸ್ವಾವಲಂಬನೆ ನಿಟ್ಟಿನಲ್ಲಿ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ. ಮುಂದಿನ 10 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಈ ಬಜೆಟ್ ಪೂರಕವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.

English summary
Union Finance Minister Nirmala Sitharaman presented the Veru Good budget, State BBJP President Nalin Kumar Kateel has responded to the Budget 2021-22 presented by Nirmana Sitharaman. Know more about Budget 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X