Nalin Kumar Kateel: ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು, ಜೂನ್‌ 24: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

State BJP President Post Has Not Resigned Says Nalin Kumar Kateel

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ರಾಜ್ಯ ವಿಧಾನಸಭೆ ಸೋಲಿನ ನೈತಿಕ ಹೊಣೆ ಹೊತ್ತು ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಖಿತವಾಗಿ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ ಬೆನ್ನಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಳೀನ್‌ ಕುಮಾರ್‌ ಕಟೀಲ್‌ ಸ್ವತಃ ಅವರೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳಿದ್ದರು.

ಇನ್ನೂ ಈ ಬಗ್ಗೆ ಮಾಧ್ಯಮಗಳಲ್ಲಿ ಈ ಸುದ್ದಿಯಾಗುತ್ತಿದ್ದಂತೆ ಬಿಜೆಪಿ ನಾಯಕರಾದ ಆರ್‌.ಅಶೋಕ್‌ ಇದು ಸತ್ಯಕ್ಕೆ ದೂರವಾದ ಸುದ್ದಿ ಎಂದಿದ್ದರೆ, ರಾಜ್ಯ ಬಿಜೆಪಿಯೂ ಕೂಡ ಮಾಧ್ಯಮ ಪ್ರಕಟಣೆ ನೀಡಿ, ರಾಜೀನಾಮೆ ನೀಡಿರುವ ಸುದ್ದಿಯನ್ನು ತಿರಸ್ಕರಿಸಿದ್ದರು. ಆ ಬಳಿಕ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದರು. ನನ್ನ ರಾಜ್ಯಾಧ್ಯಕ್ಷ ಅವಧಿ ಮುಗಿದಿದೆ, ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳಬಹುದು ಎಂದಷ್ಟೇ ಮಾತನಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+