ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಭಿವೃದ್ಧಿಗೆ ಪಣತೊಟ್ಟಿರುವ ಪಕ್ಷಕ್ಕೆ ದೇಶದ ಜನ ಮಣೆ ಹಾಕಿದ್ದಾರೆ-ಬಿಜೆಪಿ

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 8: ಗುಜರಾತ್‌ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಹುಮತ ದಾಟಿ ಭಾರತೀಯ ಜನತಾ ಪಕ್ಷ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಜೋರಾಗಿದೆ.

ಈ ಬಗ್ಗೆ ಖುಷಿ ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಜಯ ಸಾಧಿಸಲಿದೆ. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ಮನ್ನಣೆ ದೊರೆತಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಗುಜರಾತಿನ ಈ ಫಲಿತಾಂಶ ಖಂಡಿತವಾಗಿಯೂ ದಿಕ್ಸೂಚಿ ಎಂದು ಟ್ವೀಟ್‌ ಮಾಡಿದೆ.

Recommended Video

ಗುಜರಾತ್ ಭರ್ಜರಿ ಮುನ್ನಡೆಗೆ ಸಿ.ಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್ | Oneindia Kannada

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಇನ್ನು ಹಿಂದೂ ವಿರೋಧಿ, ಅಭಿವೃದ್ಧಿ ವಿರೋಧಿ ಕಾಂಗ್ರೆಸ್‌ನನ್ನು ದೇಶಾದ್ಯಂತ ಜನರು ಬುಡಸಮೇತ ಕಿತ್ತು ಎಸೆಯುತ್ತಿದ್ದಾರೆ. ಸಂಸ್ಕೃತಿಯನ್ನು ರಕ್ಷಿಸುವ, ಅಭಿವೃದ್ಧಿಗೆ ಪಣತೊಟ್ಟಿರುವ ಬಿಜೆಪಿಗೆ ದೇಶದ ಜನ ಮಣೆ ಹಾಕಿದ್ದಾರೆ. ಇದು ಗುಜರಾತ್‌ ಚುನಾವಣೆಯ ಫಲಿತಾಂಶದಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಲೇವಡಿ ಮಾಡಿದೆ.

State BJP Tweet About Gujarat Election Result 2022

ಇನ್ನು 1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿಯೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.

ಗುಜರಾತ್‌ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ 1 ಗಂಟೆಗೆ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ 19 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 6 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 37 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 0 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

English summary
State BJP Tweet about Gujarat Election Result 2022 and BJP sarcasm on Congress
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X