ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಕೊರೊನಾ ವೈರಸ್ ಪಾಸಿಟಿವ್
ಬೆಂಗಳೂರು, ಅಕ್ಟೋಬರ್ 2: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ತಮ್ಮಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವ ಬಗ್ಗೆ ಅವರು ಶುಕ್ರವಾರ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಅವರಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಕ್ವಾರೆಂಟೈನ್‌ನಲ್ಲಿರಲು ನಿರ್ಧರಿಸಿದ್ದಾರೆ.
Recommended Video
'ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ' ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಆತ್ಮೀಯರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಶೀಘ್ರವಾಗಿ ಚೇತರಿಸಿಕೊಂಡು ಪಕ್ಷ ಸಂಘಟನೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರು ಹಾಗೂ ಆತ್ಮೀಯರಾದ ಬಿ.ವೈ. ರಾಘವೇಂದ್ರ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಎಂದಿನಂತೆ ಪಕ್ಷ ಸಂಘಟನಾ ಕಾರ್ಯದಲ್ಲಿ ಸಕ್ರಿಯರಾಗಲಿ ಎಂದು ಸಚಿವ ಶಿವರಾಂ ಹೆಬ್ಬಾರ್ ಹಾರೈಸಿದ್ದಾರೆ.












Click it and Unblock the Notifications