ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡ ಮಹತ್ವದ ನಿರ್ಣಯಗಳು
ಬೆಂಗಳೂರು,ನವೆಂಬರ್ 17: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಸುಮಾರು 44 ಕೋಟಿ ರೂ. ವೆಚ್ಚದಲ್ಲಿ ಇಎಸ್‌ಐ ಆಸ್ಪತ್ರೆಗಳಿಗೆ ಉಪಕರಣ ಖರೀದಿಗೆ ಒಪ್ಪಿಗೆ ಸಿಕ್ಕಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಡಾ.ಕೆ ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಶ್ರೀಗಂಧ ನೀತಿ-2022, ನೂತನ ವನ್ಯಜೀವಿಧಾಮ ಪ್ರಸ್ತಾವನೆಗೆ ಒಪ್ಪಿಗೆ, ತುಮಕೂರು ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು 56 ಕೋಟಿ ರೂ. ಅನುದಾನ ನೀಡಲು, ಎನ್‌ಎಚ್‌ಎಂ ಫಂಡ್‌ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೆ ಒಪ್ಪಿಗೆ, ಏಳು ಆಸ್ಪತ್ರೆಗಳಿಗೆ 158 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಒಪ್ಪಿಗೆಯನ್ನು ಸಚಿವ ಸಂಪುಟದಲ್ಲಿ ನೀಡಲಾಗಿದೆ ಎಂದರು.
ನೂತನ ವನ್ಯಜೀವಿಧಾಮ ಪ್ರಸ್ತಾವನೆಗೆ ಒಪ್ಪಿಗೆ:
ರಾಜ್ಯದಲ್ಲಿ ಹೊಸದಾಗಿ ''ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಲಗತ್ತಿ ಧಾಮ ಹಾಗೂ ''ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ'', ''ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ'', ''ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ" ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.

ರಾಜ್ಯದಲ್ಲಿ ಹೊಸದಾಗಿ ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಲಗತ್ತಿ ಧಾಮಗಳನ್ನು ಹಾಗೂ ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣ
ತುಮಕೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣ. ಹಾಗೂ ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭ. ಎನ್ಹೆಚ್ಎಂ ಫಂಡ್‌ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ನಿರ್ಧಾರ ಮಾಡಲಾಗಿದೆ. 7 ಆಸ್ಪತ್ರೆಗಳಿಗೆ 158 ಕೋಟಿ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಎನ್‌ಎಚ್‌ಎಂ ಫಂಡ್‌ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೆ ಒಪ್ಪಿಗೆ ಸಿಕ್ಕಿದೆ.

ಏಳು ಆಸ್ಪತ್ರೆಗಳಿಗೆ 158 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಒಪ್ಪಿಗೆ, ತಾಯಿ ಮತ್ತು ಮಗು ಆಸ್ಪತ್ರೆ ಮೇಲ್ದರ್ಜೆಗೆ, ತರೀಕೆರೆಯಲ್ಲಿ 100 ಹಾಸಿಗೆ ತಾಯಿ-ಮಗು ಆಸ್ಪತ್ರೆ, ಲಿಂಗಸುಗೂರಿನಲ್ಲಿ 50 ಹಾಸಿಗೆ ತಾಯಿ-ಮಗು ಆಸ್ಪತ್ರೆ, ಹರಿಹರದಲ್ಲಿ 50 ಹಾಸಿಗೆ ತಾಯಿ-ಮಗು ಆಸ್ಪತ್ರೆ ಹಾಗೂ ಗೋಕಾಕ್‌ನಲ್ಲಿ 200 ಬೆಡ್ ತಾಯಿ ಮಗು ಆಸ್ಪತ್ರೆಗೆ ಅನುಮತಿ ನೀಡಿದೆ.
ಸಿ ಹಾಗೂ ಡಿ ಗ್ರೂಪ್ ನೌಕರರ ಪೈಕಿ ಪತಿ -ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ. ಏಳು ವರ್ಷ ಪೂರೈಸಿದರೂ ಕೆಲವು ಇಲಾಖೆಯಲ್ಲಿ ವರ್ಗಾವಣೆ ಅವಕಾಶ ಇರಲಿಲ್ಲ. ಗೃಹ ಇಲಾಖೆಯಲ್ಲಿ ಏಳು ವರ್ಷ ಇತ್ತು ಶಿಕ್ಷಣ ಇಲಾಖೆಯಲ್ಲಿ ಐದು ವರ್ಷ ಸೇವೆ ಸಲ್ಲಿಸಬೇಕು ಎಂದಿತ್ತು. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಪಕರಣ ರೋಗಪತ್ತೆ ಕಿಟ್ ಖರೀದಿಗೆ 154.63 ಕೋಟಿ ರೂ. ಅನುದಾನಕ್ಕೆ ಒಪ್ಪಿಗೆ ನೀಡಿದೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.












Click it and Unblock the Notifications