ನಾವು ರಾಮ ಭಕ್ತರೇ: ಕಾಂಗ್ರೆಸ್‌ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್
ಬೆಂಗಳೂರು, ಜನವರಿ ಅಯೋಧ್ಯೆ ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಸದ್ದು ಜೋರಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ನಾವು ರಾಮಭಕ್ತರು ಎಂಬ ಮಾತಿನ ಚಕಮಕಿ ಶುಉರುವಾಗಿದ್ದು, ನಾವು ರಾಮಭಕ್ತರು ಎನ್ನುವುದಕ್ಕೆ ಕಾಂಗ್ರೆಸ್ ಸಮರ್ಥನೆ ನೀಡಲು ಆರಂಭಿಸಿದೆ.
ಹೌದು, ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.ಮಹಾತ್ಮ ಗಾಂಧೀಜಿಗಿಂತ ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ಈ ಸಂಬಂಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ವಿವರಿಸಿದೆ.

- ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ.
- ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು.
- ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.
- 1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ.
- 1989 ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ.
- ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ.
- ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ.
ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ " ಬಿಜೆಪಿ ಗೆ ಸನ್ಮತಿ ದೇ ಭಗವಾನ್" ಎಂದು ಹೇಳಬೇಕಾಗಿ ಬಂದಿರೋದು ದುರಂತ!
ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ. ಬಿಜೆಪಿಯವರು ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ.
ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಬಿಜೆಪಿ ಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ, ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ.












Click it and Unblock the Notifications