ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ಫಲಿತಾಂಶ; ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ!

|
Google Oneindia Kannada News

ಬೆಂಗಳೂರು, ಡಿ. 30: ಮಹತ್ವದ ಬೆಳವಣಿಗೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸುತ್ತಿದ್ದ ರಾಜ್ಯದ ಕೆಲವು ಟಿವಿ ಮಾಧ್ಯಮಗಳಿಗೆ ರಾಜ್ಯ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ಕೊಟ್ಟಿದೆ. ಪಕ್ಷ ರಹಿತವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶವನ್ನು ಕೆಲವು ಟಿವಿ ವಾಹಿನಿಗಳು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಲಾಗುತ್ತಿವೆ ಎಂದು ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.

ಕೆಲವು ಟಿವಿ ವಾಹಿನಿಗಳು ರಾಜಕೀಯ ಚಿಹ್ನೆ ಹಾಗೂ ಪಕ್ಷಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ಸೇರಿಸಿದೆ. ಅದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನೆಯಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆ ಆಗಿದ್ದು, ಈ ರೀತಿ ಆಧಾರ ರಹಿತವಾಗಿ ಫಲಿತಾಂಶಗಳನ್ನು ಪ್ರಸಾರ ಮಾಡಬಾರದು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಚ್ಚರಿಕೆ ನೀಡಿದ್ದಾರೆ.

state election commission has issued a warning to some TV media in state

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ 2020ಕ್ಕೆ ಸಂಬಂಧಿಸಿದಂತೆ ಇಂದು ದಿ. 30.12.2020 ರಂದು ಮತಗಳ ಎಣಿಕೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿರುತ್ತದೆ. ಆದರೆ ಕೆಲವು ಟಿವಿ ವಾಹಿನಿಗಳಲ್ಲಿ ಈ ಚುನಾವಣಾ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಿದಂತಾಗುತ್ತದೆ.

state election commission has issued a warning to some TV media in state

ಆದ್ದರಿಂದ ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಗಳಾಗಿರುತ್ತವೆಂದು, ಹಾಗೂ ಈ ರೀತಿ ಆಧಾರವಿಲ್ಲದೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬಾರದೆಂದು ಹಾಗೆ ಪ್ರಕಟಿಸುತ್ತಿರುವ ದೃಶ್ಯ, ಶ್ರವಣ ಹಾಗೂ ಪತ್ರಿಕಾ ಮಾಧ್ಯಮಗಳಿಗೆ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶ ಮಾಡಿದ್ದಾರೆ.

Recommended Video

ಬೆಂಗಳೂರು: 'ಗ್ರಾ.ಪಂ ಮಟ್ಟದಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದೆ'-ಆರ್.ಆಶೋಕ್ | Oneindia Kannada

English summary
The state election commission has issued a warning to some TV media in the state, who are counting and announcing the results of the Gram Panchayat elections in a significant development. The Commission has objected that some TV channels are broadcasting political party-based elections as a result of non-party gram panchayat elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X