• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚುನಾವಣೆಯಲ್ಲಿ ಶಿಕ್ಷಕರ ಬಳಕೆ: ಆಯೋಗದ ಮಹತ್ವದ ಆದೇಶ!

|

ಬೆಂಗಳೂರು, ಅ. 08: ಚುನಾವಣೆ ಕಾರ್ಯಗಳಿಗೆ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳದಂತೆ ರಾಜ್ಯ ಚುನಾವಣಾ ಆಯೋದ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಸುತ್ತೊಲೆ ಹೊರಡಿಸಿರುವ ಆಯೋಗ, ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳದಂತೆ ಸರ್ಕಾರಕ್ಕೆ ಆದೇಶ ಮಾಡಿದೆ.

2020 ಡಿಸೆಂಬರ್ ತಿಂಗಳಲ್ಲಿ ಮುಕ್ತಾಯವಾಗುವ ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ವಿವಿಧ ಸ್ಥಳಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡುವುದನ್ನ ಕೈಬಿಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಧೀನ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊಪರಡಿಸಿದ್ದಾರೆ.

ಕರ್ನಾಟಕದಲ್ಲಿ ಅ. 12ರಿಂದ ಶಾಲಾ ಮಕ್ಕಳಿಗೆ ಪಾಠ ಆರಂಭ!

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರು ದೀರ್ಘಾವಧಿಯ ಚುನಾವಣೆ ಕರ್ತವ್ಯಗಳಿಗೆ ಅಂದರೇ, ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡದೇ, ಕೇವಲ ಚುನಾವಣಾ ದಿನಕ್ಕೆ ಸೀಮಿತಗೊಳಿಸಿ ಕರ್ತವ್ಯಕ್ಕೆ ಬಳಸಿಕೊಳ್ಳುವಂತೆ ಹೇಳಿದ್ದಾರೆ.

ವೀಡಿಯೋ ಸಂವಾದದಲ್ಲಿಯೂ ಸಹ ಆದಷ್ಟು ಶಿಕ್ಷಕರು ಹಾಗೂ ಉಪನ್ಯಾಸಕರನ್ನ ನೇಮಿಸಿಕೊಳ್ಳದಂತೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ ನೀಡಿದೆ.

ಈಗಾಗಲೇ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನ ಮತ್ತೆ ಚುನಾವಣೆಗೂ ಬಳಕೆ ಮಾಡಿಕೊಳ್ಳುತ್ತಾರೆಂಬ ಆತಂಕವನ್ನ ಚುನಾವಣೆ ಆಯೋಗ ದೂರ ಮಾಡಿದೆ.

English summary
The state has issued a grand order for the Election Commission not to use primary and secondary school teachers for election work. The Commission has issued a directive to the government not to use teachers and lecturers of undergraduate colleges for election work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X