Election Commission: ಇವಿಎಂ ಬಳಕೆ ಬಗ್ಗೆ ಸಮೀಕ್ಷೆ : ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕಳೆದ ಜನವರಿ 3 ರ ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ.

ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟ
ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯಂತೆ ಚುನಾವಣೆ ನಡೆಸಿ, ಡಿ.24 ರಂದು ಮತ ಎಣಿಕೆ ಕಾರ್ಯವು ಮುಕ್ತಾಯಗೊಂಡಿದೆ. ನಗರ ಸ್ಥಳೀಯ ಸಂಸ್ಥೆವಾರು ಫಲಿತಾಂಶದ ಅಂಕಿ ಅಂಶಗಳ ಅನುಬಂಧಗಳನ್ನು ರಾಜ್ಯ ಚುನಾವಣಾ ಆಯೋಗದ ವೆಬ್‌ಸೈಟ್ https:/karsec.gov.in ನಲ್ಲಿ ಪ್ರಕಟಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ-ಬೆಂಗಳೂರು ಗ್ರಾಮಾಂತರ ಜಿಲ್ಲೆ
ಒಟ್ಟು ವಾರ್ಡುಗಳು 19
ಕಾಂಗ್ರೆಸ್ -03, ಬಿಜೆಪಿ-14, ಜೆಡಿ(ಎಸ್)-1, ಪಕ್ಷೇತರರು-1
ಬಜಪೆ ಪಟ್ಟಣ ಪಂಚಾಯತಿ-ದಕ್ಷಿಣ ಕನ್ನಡ ಜಿಲ್ಲೆ
ಒಟ್ಟು ವಾರ್ಡುಗಳು 19
ಕಾಂಗ್ರೆಸ್ -04, ಬಿಜೆಪಿ-11, ಎಸ್‌ಡಿಪಿಐ-3, ಪಕ್ಷೇತರರು-1
ಕಿನ್ನಿಗೋಳಿ ಪಟ್ಟಣ ಪಂಚಾಯತಿ-ದಕ್ಷಿಣ ಕನ್ನಡ ಜಿಲ್ಲೆ
ಒಟ್ಟು ವಾರ್ಡುಗಳು 18
ಕಾಂಗ್ರೆಸ್ -08, ಬಿಜೆಪಿ-10
ಮಂಕಿ ಪಟ್ಟಣ ಪಂಚಾಯತಿ-ಉತ್ತರ ಕನ್ನಡ ಜಿಲ್ಲೆ
ಒಟ್ಟು ವಾರ್ಡುಗಳು 20
ಕಾಂಗ್ರೆಸ್ -08, ಬಿಜೆಪಿ-12
ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ಸಂಖ್ಯೆ 21 ಹಾಗೂ ರಾಯಚೂರು ಜಿಲ್ಲೆ ತುರವಿಹಾಳ ಪಟ್ಟಣ ಪಂಚಾಯತಿ ವಾರ್ಡ್ ಸಂಖ್ಯೆ 4 ಕ್ಕೆ ನಡೆದ ಉಪಚುನಾವಣೆಗಳಲ್ಲಿ ನಡೆದ ಎರಡೂ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.












Click it and Unblock the Notifications