ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ಪತ್ರ!
ಬೆಂಗಳೂರು, ಮೇ 26: ಕೊರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿ, ಆಡಳಿತಾಧಿಕಾರಿ ಹಾಗೂ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ಕೋವಿಡ್ ಸೋಂಕಿನ ನೆಪ ಇಟ್ಟುಕೊಂಡು ಗ್ರಾಮ ಪಂಚಾಯಿತಿಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಬಾರದು, ಚುನಾವಣೆ ನಡೆಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಚುನಾವಣಾ ಆಯೋಗಕ್ಕೆ ಈಗಾಗಲೇ ಮನವಿ ಮಾಡಿಕೊಂಡಿವೆ.
ಗ್ರಾಮ ಪಂಚಾಯಿತಿ ಚುನಾವಣೆ ವಿಚಾರ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಕೊರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಚುನಾವಣೆ ಸಿದ್ದತೆ ಸ್ಥಗಿತ
ರಾಜ್ಯದಲ್ಲಿರುವ 6,025 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಾಗಿದೆ. ಅಗಷ್ಟ್ ತಿಂಗಳೊಳಗೆ 5,800 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಾಗಿದ್ದರಿಂದ ಚುನಾವಣಾ ಸಿದ್ಧತೆಗಳನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಕಾನೂನಿಗೆ ತಿದ್ದುಪಡಿ
ಜೊತೆಗೆ ರಾಜ್ಯ ಸರ್ಕಾರವೂ ಮಾರ್ಚ್ 31, 2020 ರಂದು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5ಕ್ಕೆ ತಿದ್ದುಪಡಿ ಮಾಡಿ ಮೀಸಲಾತಿಯನ್ನು 10 ವರ್ಷಗಳಿಂದ 5 ವರ್ಷಗಳಿಗೆ ಇಳಿಸಿದೆ. ಹೀಗಾಗಿ ಹೊಸದಾಗಿ ಮೀಸಲಾತಿ ಪಟ್ಟಿ ತಯಾರಿಸುವ ಅಗತ್ಯವಿದೆ ಎಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ತಿಳಿಸಿದೆ.

ಕೋವಿಡ್ ಕೆಲಸದಲ್ಲಿ ಸಿಬ್ಬಂದಿ
ಆದರೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಸಿಬ್ಬಂದಿ ಕೋವಿಡ್ 19 ನಿಯಂತ್ರಣ ಕೆಲಸದಲ್ಲಿ ತೊಡಗಿವೆ. ಇದು ಆಯೋಗದ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಲಾಕ್‌ಡೌನ್ ಕೂಡ ಜಾರಿಯಲ್ಲಿರುವುದರಿಂದ ಸಿಬ್ಬಂದಿ ಚುನಾವಣಾ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಸಾಧ್ಯವಾಗಿಲ್ಲ.

ಇ-ಮೇಲ್ ಮೂಲಕ ತಿಳಿಸಿ
ಪ್ರಸ್ತುತ ಮತದಾರರ ಪಟ್ಟಿಯನ್ನು ತಯಾರಿಸಿ, ಹೊಸ ತಿದ್ದುಪಡಿಯಂತೆ ಹೊಸ ಮೀಸಲಾತಿ ನಿಗದಿಪಡಿಸಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸಬೇಕಾಗಿದೆ. ಸಧ್ಯ ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ತಮ್ಮ ಅಭಿಪ್ರಾಯವನ್ನು ಇ-ಮೇಲ್ ಮೂಲಕ ತಿಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಸೂಚಿಸಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications