ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ಪತ್ರ!

|
Google Oneindia Kannada News

ಬೆಂಗಳೂರು, ಮೇ 26: ಕೊರೊನಾ ವೈರಸ್ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿ, ಆಡಳಿತಾಧಿಕಾರಿ ಹಾಗೂ ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ಕೋವಿಡ್ ಸೋಂಕಿನ ನೆಪ ಇಟ್ಟುಕೊಂಡು ಗ್ರಾಮ ಪಂಚಾಯಿತಿಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಬಾರದು, ಚುನಾವಣೆ ನಡೆಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಚುನಾವಣಾ ಆಯೋಗಕ್ಕೆ ಈಗಾಗಲೇ ಮನವಿ ಮಾಡಿಕೊಂಡಿವೆ.

ಗ್ರಾಮ ಪಂಚಾಯಿತಿ ಚುನಾವಣೆ ವಿಚಾರ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಕೊರೊನಾ ವೈರಸ್‌ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಗ್ರಾ.ಪಂ. ನಾಮ ನಿರ್ದೇಶನ: ಯಡಿಯೂರಪ್ಪ, ಈಶ್ವರಪ್ಪ ಮಧ್ಯೆ ಮೂಡದ ಒಮ್ಮತ?ಗ್ರಾ.ಪಂ. ನಾಮ ನಿರ್ದೇಶನ: ಯಡಿಯೂರಪ್ಪ, ಈಶ್ವರಪ್ಪ ಮಧ್ಯೆ ಮೂಡದ ಒಮ್ಮತ?

ಚುನಾವಣೆ ಸಿದ್ದತೆ ಸ್ಥಗಿತ

ಚುನಾವಣೆ ಸಿದ್ದತೆ ಸ್ಥಗಿತ

ರಾಜ್ಯದಲ್ಲಿರುವ 6,025 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಾಗಿದೆ. ಅಗಷ್ಟ್‌ ತಿಂಗಳೊಳಗೆ 5,800 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಾಗಿದ್ದರಿಂದ ಚುನಾವಣಾ ಸಿದ್ಧತೆಗಳನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಕಾನೂನಿಗೆ ತಿದ್ದುಪಡಿ

ಕಾನೂನಿಗೆ ತಿದ್ದುಪಡಿ

ಜೊತೆಗೆ ರಾಜ್ಯ ಸರ್ಕಾರವೂ ಮಾರ್ಚ್‌ 31, 2020 ರಂದು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5ಕ್ಕೆ ತಿದ್ದುಪಡಿ ಮಾಡಿ ಮೀಸಲಾತಿಯನ್ನು 10 ವರ್ಷಗಳಿಂದ 5 ವರ್ಷಗಳಿಗೆ ಇಳಿಸಿದೆ. ಹೀಗಾಗಿ ಹೊಸದಾಗಿ ಮೀಸಲಾತಿ ಪಟ್ಟಿ ತಯಾರಿಸುವ ಅಗತ್ಯವಿದೆ ಎಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ತಿಳಿಸಿದೆ.

ಕೋವಿಡ್ ಕೆಲಸದಲ್ಲಿ ಸಿಬ್ಬಂದಿ

ಕೋವಿಡ್ ಕೆಲಸದಲ್ಲಿ ಸಿಬ್ಬಂದಿ

ಆದರೆ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಸಿಬ್ಬಂದಿ ಕೋವಿಡ್ 19 ನಿಯಂತ್ರಣ ಕೆಲಸದಲ್ಲಿ ತೊಡಗಿವೆ. ಇದು ಆಯೋಗದ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಲಾಕ್‌ಡೌನ್ ಕೂಡ ಜಾರಿಯಲ್ಲಿರುವುದರಿಂದ ಸಿಬ್ಬಂದಿ ಚುನಾವಣಾ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಸಾಧ್ಯವಾಗಿಲ್ಲ.

ಇ-ಮೇಲ್ ಮೂಲಕ ತಿಳಿಸಿ

ಇ-ಮೇಲ್ ಮೂಲಕ ತಿಳಿಸಿ

ಪ್ರಸ್ತುತ ಮತದಾರರ ಪಟ್ಟಿಯನ್ನು ತಯಾರಿಸಿ, ಹೊಸ ತಿದ್ದುಪಡಿಯಂತೆ ಹೊಸ ಮೀಸಲಾತಿ ನಿಗದಿಪಡಿಸಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸಬೇಕಾಗಿದೆ. ಸಧ್ಯ ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆಯನ್ನು ನಡೆಸುವ ಬಗ್ಗೆ ತಮ್ಮ ಅಭಿಪ್ರಾಯವನ್ನು ಇ-ಮೇಲ್ ಮೂಲಕ ತಿಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಸೂಚಿಸಿದ್ದಾರೆ.

English summary
The Commissioner of State Election Commission has written to the district authorities to give an opinion on the election of panchayats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X