ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಹೋಗದಿರುವುದೇ ಸೇಫ್

Recommended Video

      ಸೇಫ್ ಅಲ್ಲ ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿಗೆ ಹೋಗೋದು..! | Oneindia Kannada

      ಚಿಕ್ಕಮಗಳೂರು, ಆಗಸ್ಟ್.16: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಬಾಬಾಬುಡನ್ ಗಿರಿ, ಮುಳ್ಳಯ್ಯನ ಗಿರಿ ಸಂಚಾರ ಸ್ಥಗಿತಗೊಳಿಸಲಾಗಿದೆ.

      ಗುಡ್ಡ ಕುಸಿತ ಹಾಗೂ ರಸ್ತೆ ಕುಸಿಯುವ ಭೀತಿ ಇರುವುದರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಅಲ್ಲಲ್ಲಿ ನಿಧಾನವಾಗಿ ರಸ್ತೆ ಕುಸಿಯುತ್ತಿರುವುದಲ್ಲದೇ, ಹತ್ತಾರು ಕಡೆ ನಿಧಾನವಾಗಿ ಮತ್ತೆ ಮತ್ತೆ ಗುಡ್ಡ ಕುಸಿಯುತ್ತಲೇ ಇದೆ.

      ಅಪಾಯದ ಮುನ್ಸೂಚನೆ ಇರುವುದರಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇನ್ನೂ ಮೂರ್ನಾಲ್ಕು ದಿನ‌ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆಯಿದೆ. ಮುಳ್ಳಯ್ಯನ ಗಿರಿ, ಬಾಬಾ ಬುಡನ್ ಗಿರಿಗೆ ಸದ್ಯ ಪ್ರವಾಸಿಗರು ಬರದೇ ಇರುವುದು ಸೇಫ್ ಎನ್ನುತ್ತಿದ್ದಾರೆ ಸ್ಥಳೀಯರು.

      State famous tourist spot Baba Budan Giri, Mullayanagiri Traffic suspended

      ಗಿರಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ಈ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ನಿರ್ಬಂಧ ಹಾಕಿದೆ.

      State famous tourist spot Baba Budan Giri, Mullayanagiri Traffic suspended

      ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಮಳೆಯ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತಿದ್ದು, ರಸ್ತೆ ಬದಿಯ ಮಣ್ಣು ಕುಸಿಯುತ್ತಿದೆ. ಇದರಿಂದ ಮೂಡಿಗೆರೆ ತಾಲೂಕಿನ ಹೊರನಾಡು ಬಳಿಯ ಹೂವಿನಹಿತ್ಲು ಗ್ರಾಮಸ್ಥರು ಪರದಾಡುವಂತಾಗಿದೆ. ಇಷ್ಟೆಲ್ಲಾ ಆದರೂ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದಕ್ಕೆ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+