ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ
ಬೆಂಗಳೂರು, ಆಗಸ್ಟ್ 22: ಕರ್ನಾಟಕದಲ್ಲಿ ಕಳೆದ ಹತ್ತು ದಿನಗಳಲ್ಲಿ ಆನೆ ದಾಳಿಯಿಂದಾಗಿ ಒಟ್ಟು ಐದು 5 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮಾನವ ಮತ್ತು ಕಾಡುಪ್ರಾಣಿಗಳ ಸಂಘರ್ಷ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸಚಿವರು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಮಾನವ ಮತ್ತು ಕಾಡು ವನ್ಯಜೀವಿಗಳ ಸಂಘರ್ಷ ಕುರಿತು ಜಾಗೃತಿ ಮೂಡಿಸಬೇಕು. ಪ್ರಾಣಿಗಳ ದಾಳಿಯಿಂದ ಮನುಷ್ಯರ ಜೀವನ ಹಾನಿಯಾದರೆ, ಮಾನವ ಹಾಕುವ ವಿದ್ಯುತ್ ಬೇಲಿ ಸ್ಪರ್ಶದಿಂದ ಮತ್ತಿತರರ ಕಾರಣದಿಂದ ಪ್ರಾಣಿಗಳು ಸಾವಿಗೀಡಾಗುತ್ತವೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಆನೇಗಳಗೆ ರೇಡಿಯೋ ಕಾಲರ್ ಅಳವಡಿಕೆ
ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿರುವ ಅರಣ್ಯ ಅಧಿಕಾರಿಗಳು ಕಾಡಿನಲ್ಲಿರುವ ಎಲ್ಲ ಆನೆಗಳೂ ನಾಡಿಗೆ ಬರುವುದಿಲ್ಲ. ಕೆಲವು ಆನೆಗಳು ಪದೇ ಪದೆ ಜನರ ವಾಸಸ್ಥಾನಕ್ಕೆ ಬಂದು ದಾಂಗುಡಿ ಇಡುತ್ತಿವೆ. ಹಾನಿ ಮಾಡಿ, ಕೆಲವೊಮ್ಮೆ ಜೀವ ಹಾನಿ ಸಹ ಮಾಡುತ್ತವೆ. ಇಂತಹ ಆನೆಗಳನ್ನು ಗುರುತಿಸಿ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಇದುವರೆಗೆ ದಾಂಗುಡಿ ಇಡುವ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ. ಇದರಿಂದ ಆನೆಗಳ ಚಲನವಲನದ ಬಗ್ಗೆ ಸಂಪೂರ್ಣ ನಿಗಾ ಇಡಲಿ, ಮಾಹಿತಿ ಪಡೆಯಲ ಅನುಕೂಲವಾಗಲಿದೆ. ಇಲಾಖೆಯಲ್ಲಿ ಪ್ರಸ್ತುತ 30 ರೇಡಿಯೋ ಕಾಲರ್ ಲಭ್ಯವಿದೆ.
ಪುಂಡಾನೆಗಳನ್ನು ಸೆರೆ ಹಿಡಿದು ಕಾಡಿಗೆ ಬಿಡುವ ಮೊದಲು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಹಿಂದೆ ವಿಶ್ವ ವನ್ಯಜೀವಿ ನಿಧಿಗಾಗಿ ಕಾಯಿದೆ, ಇಲಾಖೆ ಈಗ ರೇಡಿಯೋ ಕಾಲರ್ ಖರೀದಿ ಮಾಡಲಾಗುತ್ತಿದೆ. ಪ್ರತಿ ರೇಡಿಯೋ ಕಾಲರ್ ಗೆ ಸುಮಾರು 7 ಲಕ್ಷ ವೆಚ್ಚವಾಗುತ್ತದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

ಜನವಸತಿಗಳ ಸಮೀಪ, ರೈತರ ಜಮೀನು-ತೋಟಗಳಿಗೆ, ಹೊಲ ಗದ್ದೆಗಳಿಗೆ ಆನೆಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಜನರು ತ್ವರತವಾಗಿ ಆಕಾಡಿಗೆ ಮರಳಿಸಲು ಅರಣ್ಯ ಇಲಾಖೆಗೆ ಸಹಕರಿಸಬೇಕು. ವಾಟ್ಸ್ ಅಪ್, ಸಂದೇಶಗಳ ಮೂಲಕ ಮಾಹಿತಿ ನೀಡಬೇಕು. ಇದರಿಂದ ಸಂಭವನೀಯ ಜೀವ ಹಾನಿ ತಪ್ಪಲಿದೆ ಎಂದು ಅವರು ಮನವರಿಕೆ ಮಾಡಿಕೊಟ್ಟರು.
ಕರ್ನಾಟಕದಲ್ಲಿ ಆನೆಗಳ ಹಾವಳಿ ಹೆಚ್ಚಾಗಿರುವ ಚಾಮರಾಜನಗರ ಜಿಲ್ಲೆ ಹಾಗೂ ಕೊಡಗು ಭಾಗದಲ್ಲಿ ಹಾವಳಿ ತಪ್ಪಿಸಲು ಸದ್ಯ ಕಾರ್ಯ ನಿರ್ವಹಿಸುತ್ತಿರುವ ಆನೆ ಕ್ಷಿಪ್ರ ಕಾರ್ಯಪಡೆಯ ಗುಂಪುಗಳನ್ನು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.












Click it and Unblock the Notifications