ರಿಜಿಸ್ಟರ್ ಮ್ಯಾರೇಜ್ ಇನ್ಮುಂದೆ ಮತ್ತಷ್ಟು ಸುಲಭ : ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರ ಸಮ್ಮತಿ

ಬೆಂಗಳೂರು, ಫೆಬ್ರವರಿ 01: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋಧನೆ ನೀಡಿದೆ. ನೋಂದಣಿ ವಿವಾಹ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ಸೂಚಿಸಿದೆ.

ಸಚಿವ ಸಂಪುಟ ಸಭೆಯ ಬಳಿಕೆ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದೂ ವಿವಾಹ ನೊಂದಣಿ ಕಾಯ್ದೆ2024 ಕ್ಕೆ ಒಪ್ಪಿಗೆ ಕಚೇರಿಗಳಲ್ಲಿ ಮೊದಲು ವಿವಾಹ ಆಗುತ್ತಿದ್ದವು. ಈಗ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶವನ್ನ ಕಲ್ಪಿಸಲಾಗಿದೆ. ಗ್ರಾಮ ಒನ್,ಕಾವೇರಿ 2, ಬಾಪೂಜಿ ಸೇವಾ‌ ಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ಮೇಲೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದರು.

State Government Agrees To Simplify Marriage Registration

ಹಾಸನ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಮೊತ್ತ 142 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ರಾಯಚೂರು ಯುನಿವರ್ಸಿಟಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. 104 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಕಲಿಕಾ ವಾತಾವರಣ ಅಭಿವೃದ್ಧಿ ಗೆ 26 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಗೆ ಅನುಮೋದನೆಯನ್ನ ಸಂಪುಟ ನೀಡಿದೆ.

ಅಸ್ತಿತ್ವದಲ್ಲಿರುವ 82 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಕಲಿಕಾ ವಾತಾವರಣ ಅಭಿವೃದ್ಧಿ ಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದ್ದು, ನಗರಾಭಿವೃದ್ಧಿ ಇಲಾಖೆಯ 10 ಮಹಾ ನಗರ ಪಾಲಿಕೆಗಳಲ್ಲಿ, 24 ನಗರ ಸಭೆಗಳಲ್ಲಿ ಒಟ್ಟೂ 34 ಆಧುನಿಕ ಅನಿಲ ವಿದ್ಯುತ್ ಚಿತಾಗಾರ ಸ್ಥಾಪನೆಗೆ ಅನುಮೋದನೆ ಹಾಗೂ 136 ಕೋಟಿ ಚಿತಾಗಾರ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ.

ರಾಯಚೂರು ತಾಲೂಕಿನ ಚಿಕ್ಕ ಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರ ನದಿಗೆ ಅಡ್ಡಲಾಗಿ ಮಂತ್ರಾಲಯದ ಬಳಿ ಆಂಧ್ರದ ಅನುಮತಿ ಪಡೆದು ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲು 158 ಕೋಟಿ ರೂಪಾಯಿಗಳ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹಣೆಗೆ ಶೈತ್ಯಾಗಾರ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆಯನ್ನ ಸಚಿವ ಸಂಪುಟ ಸಭೆ ನೀಡಿದೆ.

ಪೊಲೀಸ್ ಇಲಾಖೆಯ ಪ್ರಧಾನ ಕಚೇರಿ ಸೇರಿದಂತೆ ಇತರ ಘಟಕಗಳಲ್ಲಿ ವಾಹನಗಳಿಗೆ ಪೆಟ್ರೋ ಕಾರ್ಡ್ ಮೂಲಕ ಇಂಧನ ಮತ್ತು ತೈಲವನ್ನು ಮೂರು ವರ್ಷಗಳ ಅವಧಿಗೆ 120 ಕೋಟಿ ಅಂದಾಜು ವೆಚ್ಚದಲ್ಲಿ ಖರೀದಿಸಲು ಕ್ಯಾಬಿನೆಟ್ ಅನುಮತಿ ನೀಡಿದ್ದು, ಹೊಸ ವೈದ್ಯಕೀಯ ಕಾಲೇಜು ಹಾಸ್ಟೆಲ್ ಬೋಧಕ ಬೋಧಕೇತರ ಸಿಬ್ಬಂದಿ ವಸತಿ ನಿಲಯ, ಎಲ್ಲ ಕಟ್ಟಡ ಕಾಮಗಾರಿಗಳ ನಿರ್ಮಾಣಕ್ಕೆ 455 ಕೋಟಿ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆಯನ್ನ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+