ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 7ರವರೆಗೂ ಚಿತ್ರಮಂದಿರಗಳಲ್ಲಿ ಶೇ100 ಭರ್ತಿಗೆ ಅವಕಾಶ ನೀಡಿ ಸರ್ಕಾರದ ಆದೇಶ

|
Google Oneindia Kannada News

ಬೆಂಗಳೂರು, ಏಪ್ರಿಲ್ 3: ಕೊರೊನಾ ಪ್ರಕರಣಗಳು ಏರುತ್ತಿರುವ ಕಾರಣದಿಂದಾಗಿ ಚಿತ್ರಮಂದಿರದ ಆಸನ ಭರ್ತಿಗೆ ಶೇ. 50ರಷ್ಟು ಮಿತಿ ಹೇರಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.

Recommended Video

ಏ.7ರವರೆಗೆ 100% ಸೀಟು ಭರ್ತಿಗೆ ಅವಕಾಶ, ಸಿನಿಮಾ ಇಂಡಸ್ಟ್ರಿ ಮನವಿಗೆ ಒಪ್ಪಿಗೆ ಸೂಚಿಸಿದ ಸಿಎಂ | Oneindia Kannada

ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 7ರ ನಂತರ ಶೇ 50ರಷ್ಟು ಭರ್ತಿಗೆ ಮಾತ್ರ ಅವಕಾಶ ಇರುತ್ತದೆ ಎಂದು ತಿಳಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಎಂಟು ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವುದಾಗಿ ಶುಕ್ರವಾರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿತ್ತು.

 State Government Allows 100 Percent Occupancy In Theatres Till April 7

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತ್ರಮಂದಿರದಲ್ಲಿ ಶೇ 50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿ ಒಂದು ಸೀಟು ಬಿಟ್ಟು ಒಂದು (ಪರ್ಯಾಯ ಆಸನದಲ್ಲಿ ಕೂರಬೇಕು) ಸೀಟಿನಲ್ಲಿ ಕೂರಬೇಕು ಎಂದು ತಿಳಿಸಲಾಗಿತ್ತು. ಮೈಸೂರು, ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡಕ್ಕೂ ಇದು ಅನ್ವಯವಾಗುತ್ತದೆ ಎನ್ನಲಾಗಿತ್ತು.

ಕೋವಿಡ್ 2ನೇ ಅಲೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿಕೋವಿಡ್ 2ನೇ ಅಲೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿ

ಆದರೆ ಶೇ 100ರಷ್ಟು ಆಸನ ಭರ್ತಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿ ಏಪ್ರಿಲ್ 7ರವರೆಗೂ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿದೆ.

English summary
State government issued order and allows 100 percent occupancy in theatres till April 7
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X