Karnataka Cabinet: 20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು :ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯಗಳ ಬಗ್ಗೆ ಚರ್ಚೆ ನಡೆದಿದ್ದು, ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಈ ಕೇಂದ್ರವನ್ನು ಸ್ಥಾಪಿಸಲಾಗುವುದು. ರಾಷ್ಟ್ರೀಯ ಸಾಫ್ಟ್‌ವೇರ್ ಹಾಗೂ ಸೇವಾ ಸಂಸ್ಥೆಯ ಒಕ್ಕೂಟದ (ನಾಸ್ಕಾಂ) ಸಹಭಾಗಿತ್ವದಲ್ಲಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಕಿಯೊನಿಕ್ಸ್ ತಾಣದಲ್ಲಿ ನಾಲ್ಕು ವರ್ಷಗಳಲ್ಲಿ ಒಟ್ಟು ₹ 20 ಕೋಟಿ ವೆಚ್ಚದಲ್ಲಿ ಈ ಕೇಂದ್ರವು ಅಸ್ತಿತ್ವಕ್ಕೆ ಬರಲಿದೆ.

ಕೇಂದ್ರ ಸ್ಥಾಪನೆಗೆ ಬಳಕೆಯಾಗಲಿರುವ ಹಣಕಾಸು ನೆರವು- ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ), ಕರ್ನಾಟಕ ಸರ್ಕಾರ ಮತ್ತು ಉದ್ಯಮ ಪಾಲುದಾರರ 40:40:20 ಕೊಡುಗೆ ಮಾದರಿಯಲ್ಲಿ ಇರಲಿದೆ. ಈ ಎಐ ಶ್ರೇಷ್ಠತಾ ಕೇಂದ್ರವು ಕೃತಕ ಬುದ್ಧಿಮತ್ತೆ, ರೋಬೊಟಿಕ್ಸ್, ಸ್ವಯಂಚಾಲನೆ, ಪೂರೈಕೆ ಸರಪಳಿ ಗರಿಷ್ಠ ಸದ್ಬಳಕೆ ಮತ್ತು ಡಿಜಿಟಲ್ ಪರಿವರ್ತನೆ ಸೇರಿದಂತೆ ಆದ್ಯತೆಯ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲಿದೆ.
ಈ ಉಪಕ್ರಮವು ನವೋದ್ಯಮಗಳು, ಎಂಎಸ್‌ಎಂಇಗಳು, ಉದ್ಯಮ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಅಗತ್ಯ ಬೆಂಬಲ ನೀಡುವ ಮೂಲಕ ರಾಜ್ಯದಲ್ಲಿನ ನಾವೀನ್ಯತೆ ವ್ಯವಸ್ಥೆಯನ್ನು ಬಲಪಡಿಸುವ ಗುರಿ ಹೊಂದಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ, ಈ ಕೇಂದ್ರವು ಅತ್ಯಾಧುನಿಕ ಪ್ರಯೋಗಾಲಯಗಳು ಮತ್ತು ಪರೀಕ್ಷಾ ಸೌಲಭ್ಯಗಳನ್ನು ಸ್ಥಾಪಿಸುವ, ಡೀಪ್-ಟೆಕ್ ಸ್ಟಾರ್ಟ್-ಅಪ್‌ಗಳನ್ನು ಬೆಂಬಲಿಸುವ ಮತ್ತು ಪರಿಕಲ್ಪನೆಗಳ ಪುರಾವೆ, ಉದ್ಯಮ ಸಹಯೋಗಗಳು ಮತ್ತು ತಂತ್ರಜ್ಞಾನ ಸದ್ಬಳಕೆ ಸುಗಮಗೊಳಿಸುವ ನಿರೀಕ್ಷೆಯಿದೆ.
ಈ ಉಪಕ್ರಮದ ಮಹತ್ವವನ್ನು ತಿಳಿಸಿರುವ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಗೌರವಾನ್ವಿತ ಶ್ರೀ ಪ್ರಿಯಾಂಕ್ ಖರ್ಗೆ ಅವರು, "ಇದು ಕರ್ನಾಟಕದ ಡೀಪ್-ಟೆಕ್ ದಶಕವಾಗಿದ್ದು, ಈ ಶ್ರೇಷ್ಠತಾ ಕೇಂದ್ರವು ಡೀಪ್-ಟೆಕ್ ಸ್ಟಾರ್ಟ್-ಅಪ್‌ಗಳು ಮತ್ತು ಕೈಗಾರಿಕಾ ಸಹಯೋಗಗಳಿಗೆ ಒಂದು ಚಿಮ್ಮು ಹಲಗೆಯಾಗಿ ಕಾರ್ಯನಿರ್ವಹಿಸಲಿದೆ. ಸರ್ಕಾರ, ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮವನ್ನು ಒಟ್ಟಿಗೆ ತರುವ ಮೂಲಕ, ನಾವು ಸಂಶೋಧನೆಯಿಂದ ಮಾರುಕಟ್ಟೆ-ಸಿದ್ಧ ನಾವೀನ್ಯತೆಗೆ ಹೊಸ ಪಥ ನಿರ್ಮಿಸುತ್ತಿದ್ದೇವೆ" ಎಂದು ಹೇಳಿದ್ದಾರೆ.
ಈ ಉಪಕ್ರಮವು ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಜೊತೆಗೆ ಜಾಗತಿಕ ತಂತ್ರಜ್ಞಾನ ಮತ್ತು ಪ್ರಮುಖ ಉದ್ಯಮಗಳ ಮಧ್ಯೆ ಸಹಯೋಗಕ್ಕೆ ಅವಕಾಶ ಕಲ್ಪಿಸಿಕೊಡಲಿದೆ. ಕೇಂದ್ರದ ಪ್ರಮುಖ ಕಾರ್ಯಕ್ಷಮತೆಯ ಮಾನದಂಡಗಳಲ್ಲಿ ನೆರವು ಕಲ್ಪಿಸಿದ / ಪೋಷಿಸಿದ ನವೋದ್ಯಮಗಳ ಸಂಖ್ಯೆ, ಅಭಿವೃದ್ಧಿಪಡಿಸಿದ ಮೂಲಮಾದರಿಗಳು, ಬೌದ್ಧಿಕ ಆಸ್ತಿಗೆ ಸಲ್ಲಿಸಿದ ಮನವಿಗಳು, ಉದ್ಯಮ ಸಹಯೋಗಗಳು ಮತ್ತು ತರಬೇತಿ ಪಡೆದ ಪರಿಣತ ವೃತ್ತಿಪರರು, ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಲು ವಾರ್ಷಿಕ ಬೆಳವಣಿಗೆಯ ಗುರಿಗಳನ್ನು ಒಳಗೊಂಡಿರಲಿದೆ.
ಕೇಂದ್ರ ಸ್ಥಾಪಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಮತ್ತು ಯೋಜನಾ ಇಲಾಖೆಯಿಂದ ತಾತ್ವಿಕ ಅನುಮೋದನೆ ದೊರೆತಿದೆ. ಉದ್ಯಮ 4.0 ತಂತ್ರಜ್ಞಾನಗಳು ಮತ್ತು ಡೀಪ್-ಟೆಕ್ ನಾವೀನ್ಯತೆಗಾಗಿ ದೇಶದ ಪ್ರಮುಖ ಕೇಂದ್ರವಾಗುವ ನಿಟ್ಟಿನಲ್ಲಿ ಸಾಗಿರುವ ಕರ್ನಾಟಕದ ಯಶಸ್ಸಿನ ಪ್ರಯಾಣದಲ್ಲಿ ಈ ನಿರ್ಧಾರವು ಮಹತ್ವದ ಮೈಲಿಗಲ್ಲು ಆಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications