Government Employees: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಮಹತ್ವದ ಆದೇಶ

ಬೆಂಗಳೂರು,ಮೇ 05: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.1.50ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ದಿನಾಂಕ 01-01-2025ರಿಂದ ಅನ್ವಯವಾಗುವಂತೆ ಶೇ.1.50 ತುಟ್ಟಿಭತ್ಯೆಯನ್ನು ಹೆಚ್ಚಿಸಿ ಅನುಮೋದನೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.10.75ರಿಂದ 12.25ರಷ್ಟು ಅಂದರೇ 1.50ರಷ್ಟು ಹೆಚ್ಚಿಸಿದೆ. ಇಂತಹ ಸಿಎಂ ಸಿದ್ಧರಾಮಯ್ಯಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ನೌಕರರ ಪರವಾಗಿ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಧನ್ಯವಾದಗಳನ್ನು ತಿಳಿಸಿದ್ದಾರೆ.

State Government Employees Govt Orders 1 50 Hike In Dearness Allowance

ಎಲ್ಲಾ ಜಿಲ್ಲೆಗಳಲ್ಲೂ ಉಪ ನಿರ್ದೇಶಕರು ಇರಲೇ ಬೇಕು: ಸಿಎಂ ಖಡಕ್ ಸೂಚನೆ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು ಎಂದು ಪ್ರಶ್ನಿಸಿದ ಸಿಎಂ, ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಕಾರ್ಯ ಚಟುವಟಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದಕ್ಕಿಂತ ಉತ್ತಮ ರೀತಿಯಲ್ಲಿ ನಮ್ಮ ಮಿತಿಯೊಳಗೆ ಕ್ರೀಡಾ ಕಾರ್ಯ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಕ್ರಮ ವಹಿಸಲು ಸೂಚಿಸಿದರು. ಮುಂದಿನ ಐದಾರು ತಿಂಗಳಲ್ಲಿ , ದಸರಾ ಕ್ರೀಡಾಕೂಟ ಆರಂಭವಾಗುವುದರೊಳಗೆ ಪ್ರಾಧಿಕಾರ ಕ್ರಿಯಾಶೀಲ ಆಗಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟರೂ ಅಗತ್ಯ ತರಬೇತುದಾರರ ನೇಮಕಾತಿ ಆಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 176 ತರಬೇತುದಾರರ ನೇಮಕಾತಿಗೆ ನಾನೇ ಸೂಚಿಸಿ ಒಂದು ವರ್ಷ ಆಗಿದೆ. ಆದರೂ ನೇಮಕಾತಿ ಪ್ರಕ್ರಿಯೆ ಚುರುಕು ಆಗದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಪ್ರತೀ ಜಿಲ್ಲೆಯಲ್ಲೂ ಉಪ ನಿರ್ದೇಶಕರು ಕಡ್ಡಾಯವಾಗಿ ಇರಬೇಕು ಎನ್ನುವ ಸೂಚನೆ ನೀಡಿದರು.

ಪ್ರತೀ ವರ್ಷ ಪ್ರಾಧಿಕಾರದ ಸಭೆ, ಪ್ರತೀ ವರ್ಷ ಆಡಿಟ್ ಆಗಬೇಕು. ಪ್ರತೀ ವರ್ಷ ನೇಮಕಾತಿ ನಡೆಯಬೇಕು. ತಪ್ಪಿದರೆ ಸಹಿಸಲ್ಲ ಎನ್ನುವ ಎಚ್ಚರಿಕೆ ನೀಡಿದರು. ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸಲು ಅನುಧಾನ ನಿಗಧಿ ಪಡಿಸಲು ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸುವ ಮೊದಲು ಕನಿಷ್ಠ 15 ರಾಷ್ಟ್ರಗಳು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಸರಿಯಾದ ಗೈಡ್ ಲೈನ್ಸ್ ಗಳನ್ನು ಸಿದ್ಧಪಡಿಸಿ ಎನ್ನುವ ಸೂಚನೆ ನೀಡಿದರು.

ಕೇವಲ ಲೆಟರ್ ಹೆಡ್ ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟ ಎಂದು ಬರುವ ಸಂಸ್ಥೆಗಳಿಗೆ ಕಡಿವಾಣ ಹಾಕಿ ಪ್ರಾಮಾಣಿಕವಾಗಿ ಕ್ರೀಡಾಕೂಟ ನಡೆಸುವವರಿಗೆ ಪ್ರೋತ್ಸಾಹ ನೀಡಬೇಕು ಎನ್ನುವ ಸೂಚನೆ ನೀಡಿದರು. ಕಂಬಳವನ್ನು ಗ್ರಾಮೀಣ ಕ್ರೀಡೆ ಎಂದು ಮಾನ್ಯತೆ ನೀಡಿ ಪ್ರೋತ್ಸಾಹ ನೀಡುವ ಬಗ್ಗೆ ಚರ್ಚಿಸಲಾಯಿತು. ಕ್ರೀಡಾಕೂಟಗಳಿಗೆ ಅನುದಾನ ನೀಡುವುದು ಆನ್ ಲೈನ್ ನಲ್ಲಿ ದಾಖಲಾಗಬೇಕು. ಕ್ರೀಡಾಕೂಟ ಮುಗಿದ ಬರುವವರಿಗೆ ಅವಕಾಶ ಇರಬಾರದು ಎನ್ನುವ ಬಗ್ಗೆ ಚರ್ಚಿಸಲಾಯಿತು.

ಕಂಠೀರವ ಕ್ರೀಡಾಂಗಣ ಹವಾ ನಿಯಂತ್ರಿತ ವ್ಯವಸ್ಥೆ ಶೀರ್ಘ್ರದಲ್ಲಿ ಜಾರಿಗೊಳಿಸುವಂತೆ ಸೂಚನೆ ನೀಡಿದರು. ಕಂಠೀರವ ಕ್ರೀಡಾಂಗಣ ನಿರ್ಮಾಣವಾಗಿ 29 ವರ್ಷಗಳಾಗಿರುವುದರಿಂದ ಪ್ರೇಕ್ಷಕರ ಸುರಕ್ಷತೆಗೆ ಗ್ಯಾಲರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕಂಠೀರವ ಕ್ರೀಡಾಂಗಣದ ಜಿಮ್, ಶೌಚಾಲಯ, ಟ್ರಾಕ್ ಗಳ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು. ಪದೇ ಪದೇ ಪರಿಶೀಲನೆ ನಡೆಸಿ, ಲೋಪ ಕಂಡರೆ ವಾರ್ಡನ್ ಗಳ ವಿರುದ್ಧ ಕ್ರಮ ಕೈಗೊಂಡು ವರದಿ ನೀಡುವಂತೆ , ಕ್ರೀಡಾ ಹಾಸ್ಟೆಲ್ ಗಳಿಗೆ surprise visit ಮಾಡಿ , ಅಲ್ಲೇ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ವರದಿ ನೀಡಲು ಸಿಎಂ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+