Government Employees: ರಾಜ್ಯ ಸರ್ಕಾರಿ ನೌಕರರ ರಜೆ ಮಂಜೂರಾತಿ ಬಗ್ಗೆ ಮಹತ್ವದ ಅಪ್ಡೇಟ್
ಬೆಂಗಳೂರು, ಡಿಸೆಂಬರ್ 21: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ರಜೆ ಮಂಜೂರಾತಿ ಕುರಿತು ಮಹತ್ವದ ಆದೇಶವನ್ನ ಹೊರಡಿಸಿದೆ. ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ನೌಕರರು ಇನ್ಮುಂದೆ ರಜೆ ಮಂಜೂರಾತಿಯನ್ನು ಕಡ್ಡಾಯವಾಗಿ ಇ ಆಫೀಸ್ ತಂತ್ರಜ್ಞಾನದಲ್ಲಿ ಸಲ್ಲಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಯುಕ್ತಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಇ ಆಫೀಸ್ ತಂತ್ರಾಂಶದಲ್ಲಿ ಎಲ್ಲಾ ರೀತಿಯ ರಜೆ ಕೋರಿಕೆಯನ್ನು ಸಲ್ಲಿಸಿ ಮೇಲಾಧಿಕಾರಿಗಳ ಮಂಜೂರಾತಿ ಪಡೆಯುವುದು ಕಡ್ಡಾಯವಾಗಿದೆ ಎಂದು ತಿಳಿಸಲಾಗಿದೆ. ಇ ಆಫೀಸ್ ತಂತ್ರಾಂಶದಲ್ಲಿ ಯಾವುದೇ ರೀತಿಯ ತೊಂದರೆಗಳ ನಿವಾರಣೆಗೆ ಶ್ರೀ ಹರೀಶ್ ತಂತ್ರಜ್ಞರು ಇ ಆಫೀಸ್ ಇವರನ್ನು ಸಂರ್ಪರ್ಕಿಸಲು ಸೂಚನೆ ನೀಡಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ
ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ ಮುಖ್ಯಮಂತ್ರಿಗಳಿಂದ ನೆರವೇರಲಿದೆ.
ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ
ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾತಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ. ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ.
ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ. ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.
3 ತಿಂಗಳಲ್ಲಿ ಸೂಪರ್ ಸ್ಪೆಷಾಲಿಟ್ಟಿ ಆಸ್ಪತ್ರೆ ಲಭ್ಯ
ಜಯದೇವ ಆಸ್ಪತ್ರೆ ಉದ್ಘಾಟನೆ ನಂತರ ಮುಂದಿನ ಮೂರು ತಿಂಗಳಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಗಾಟಿಸಿ ಸಾರ್ವಜನಿಕರ ಸೇವೆಗೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು. ಹಳೇ ಜಿಲ್ಲಾ ಆಸ್ಪತ್ರೆ ಕಡೆವಿ ಅಲ್ಲಿ 100 ಹಾಸಿಗೆಯ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಜಿಮ್ಸ್ ಆವರಣದಲ್ಲಿಯೇ 50 ಹಾಸಿಗೆಯ ಕ್ರಿಟಿಕಲ್ ಕೇರ್ ಯೂನಿಟ್, ಸುಟ್ಟು ಗಾಯಗಳ ಘಟಕ ಸ್ಥಾಪಿಸಲಾಗುತ್ತಿದೆ. ಇದಲ್ಲದೆ ಗುಲಬರ್ಗಾ ವಿ.ವಿ.ಯಲ್ಲಿ 10 ಎಕರೆ ಜಮೀನಿನಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ.












Click it and Unblock the Notifications