ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಇನ್ನು ಮುಂದೆ ಸಿಗಲಿದೆ ಹೆಚ್ಚಿನ ಸಂಬಳ
ಬೆಂಗಳೂರು, ಜೂನ್ 23: ಕಳೆದ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ವೇತನ ಪರಿಷ್ಕರಣೆ ಇನ್ನೂ ನೌಕರರ ಕೈಸೇರದೆ ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಜುಲೈ ಒಂದರಿಂದ ಪರಿಷ್ಕೃತ ವೇತನವನ್ನು ಪಡೆಯಲಿದ್ದಾರೆ.
ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಆರನೇ ವೇತನ ಆಯೋಗದ ಶಿಫಾರಸ್ಸನ್ನು ಯಥಾವತ್ತು ಜಾರಿ ಮಾಡುವುದಾಗಿ ಹೇಳಿದ್ದರು. ಕೆಲವೇ ದಿನಗಳಲ್ಲಿ ತುಟ್ಟಿ ಭತ್ಯೆ 13% ಮತ್ತು ಮೂಲ ವೇತನ 30% ಹೆಚ್ಚಳಕ್ಕೆ ಹೆಚ್ಚಾಗುತ್ತದೆ ಎಂದಿದ್ದರು. ಆದರೆ ಈ ವರೆಗೆ ಈ ಹೆಚ್ಚಳ ಆಗಿರಲಿಲ್ಲ.
ಕಳೆದ ಏಪ್ರಿಲ್ ಒಂದರಿಂದಲೇ ಪರಿಷ್ಕೃತ ವೇತನ ಜಾರಿಯಾಗಿದೆಯಾದರೂ ಈವರೆಗೆ ಸರ್ಕಾರಿ ನೌಕರರ ಖಾತೆಗೆ ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ಜುಲೈ ಒಂದರಿಂದ ಸರ್ಕಾರಿ ನೌಕರರಿಗೆ ಪರಿಷ್ಕೃತ ಸಂಬಳ ಜಮೆ ಆಗಲಿದ್ದು ಜೊತೆಗೆ ಏಪ್ರಿಲ್ ತಿಂಗಳೀಂದ ಬಾಕಿ ಉಳಿದಿದ್ದ ಸಂಬಳದ ಪಾವತಿಯೂ ನಗದು ರೂಪದಲ್ಲೇ ಆಗಲಿದೆ.

ಆದರೆ ಬದಲಾದ ಪರಿಸ್ಥಿತಿಯಿಂದಾಗಿ 43% ಹೆಚ್ಚಾಗಬೇಕಿದ್ದ ತುಟ್ಟಿ ಭತ್ಯೆ ಮತ್ತು ಮೂಲ ವೇತನ 30% ಅಷ್ಟೆ ಹೆಚ್ಳವಾಗುತ್ತಿದೆ. ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತರಲು 10,500 ಕೋಟಿಗಳ ವೆಚ್ಚ ಆಗಲಿದ್ದು, ರೈತರ ಸಾಲಮನ್ನಾ ಕೂಡ ಮಾಡಬೇಕಿರುವ ಕಾರಣ ವೇತನ ಹೆಚ್ಚಳವನ್ನು ಕಡಿಮೆ ಮಾಡಲಾಗಿದೆ.
ಬಜೆಟ್‌ನಲ್ಲಿ ಘೋಷಣೆ ಆದಾಗ್ಯೂ ಜಾರಿಗೆ ಬರಲು ತಡವಾದಾಗ ರಾಜ್ಯ ಸರ್ಕಾರಿ ನೌಕರರ ಒತ್ತಡ ಹೆಚ್ಚಾದ ಕಾರಣ ಸಂಪುಟದಲ್ಲೂ ಆ ಬಗ್ಗೆ ಚರ್ಚೆ ಮಾಡಿ ವರದಿಯನ್ನು ಅಂಗೀಕಾರ ಮಾಡಲಾಯಿತು ಮತ್ತು ಹಣಕಾಸು ಇಲಾಖೆಯ ಅನುಮತಿಯನ್ನೂ ಪಡೆಯಲಾಗಿದೆ. ಜುಲೈ ತಿಂಗಳಲ್ಲಿ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ಬಾಕಿ ಉಳಿದಿರುವ ಹೆಚ್ಚುವರಿ ವೇತನ ಕೈಸೇರಲಿದ್ದು ದೊಡ್ಡ ಮೊತ್ತದ ಹಣ ಖಾತೆಗಳಿಗೆ ಜಮಾವಣೆ ಆಗಲಿದೆ.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications