• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!

|

ಬೆಂಗಳೂರು, ಜು. 21: ಸಿಇಟಿ ಪರೀಕ್ಷೆಯನ್ನು ನಿಗದಿಯಂತೆಯೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮಾದರಿಯಲ್ಲಿಯೇ ಸಿಇಟಿ ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಅದಕ್ಕಿಂತ ದೊಡ್ಡ ಸವಾಲನ್ನು ಇಲಾಖೆ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ.

   ಕೊರೊನ ನಿಯಂತ್ರಣಕ್ಕೆ 5T ಸೂತ್ರ ಹೇಳಿದ ಯಡಿಯೂರಪ್ಪ | Oneindia Kannada

   ಕೊರೊನಾ ವೈರಸ್‌ನಿಂದಾಗಿ ಮುಂದೂಡಲ್ಪಟ್ಟಿದ್ದ ಸಿಇಟಿ ಪರೀಕ್ಷೆ, ಈ ಬಾರಿ ಕೋವಿಡ್‌ಗೆ ಸವಾಲು ಹಾಕುವಂತೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಹೌದು ಕೋವಿಡ್ ಪಾಸಿಟಿವ್ ಇದ್ದವರಿಗೂ ಸಿಇಟಿ ಬರೆಯಲು ಅವಕಾಶವನ್ನು ಕೊಡಲಾಗಿದೆ. ಆ ಮೂಲಕ ಉನ್ನತ ಶಿಕ್ಷಣ ಇಲಾಖೆ ಒಂದರ್ಥದಲ್ಲಿ ಕೊರೊನಾ ವೈರಸ್‌ಗೆ ಸವಾಲು ಹಾಕಿದೆ. ಇದೇ ಸಂದರ್ಭದಲ್ಲಿ ಪಿಜಿ ಸಿಟಿಯನ್ನು ಮುಂದೂಡಿರುವುದು ಆಶ್ಚರ್ಯ ಮೂಡಿಸಿದೆ.

   ನಿಗದಿಯಂತೆ ಸಿಇಟಿ

   ನಿಗದಿಯಂತೆ ಸಿಇಟಿ

   ಈ ಮೊದಲೇ ನಿಗದಿ ಪಡಿಸಿದಂತೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 30 ರಂದು ಬೆಳಿಗ್ಗೆ 10:30 ರಿಂದ 11:50 ಮೊದಲ ದಿನ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು. ನಂತರ ಮಧ್ಯಾಹ್ನ 2:30 ರಿಂದ 3:50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ.

   ಕರ್ನಾಟಕ ಸಿಇಟಿ ಹಾಲ್ ಟಿಕೆಟ್ ಡೌನ್ ಲೋಡ್ ಹೇಗೆ?

   ಮರುದಿನ ಜುಲೈ 31 ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿಕೆ ಕೊಟ್ಟಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲಿ ಪರೀಕ್ಷೆ ನಡೆಯಲಿದೆ‌ ಎಂದಿದ್ದಾರೆ.

   ಕೋವಿಡ್ ಸೋಂಕಿತರಿಗೆ

   ಕೋವಿಡ್ ಸೋಂಕಿತರಿಗೆ

   ಕೋವಿಡ್-19 ಸೋಂಕು ದೃಢಪಟ್ಟಿವರಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕೊಡುವ ಮಹತ್ವದ ನಿರ್ಧಾರಕ್ಕೆ ಬದ್ಧವಿರುವುದಾಗಿ ಸಚಿವ ಡಾ. ಅಶ್ವಥ್ ನಾರಾಯಣ ಮತ್ತೊಮ್ಮೆ ಹೇಳಿದರು.

   ಕೆಮ್ಮು, ನೆಗಡಿ, ಜ್ವರ ಅಥವಾ ಕ್ವಾರೆಂಟೈನ್‌ ಸ್ಥಳದಿಂದ ಬರುವವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಕೋವಿಡ್-19 ಪಾಸಿಟಿವ್ ಇದ್ದವರಿಗೆ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಬ್ಬರಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುವುದು. ಪರೀಕ್ಷೆ ಮುಗಿದ ಬಳಿಕ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜೇಷನ್ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.

   ಎಸ್‌ಎಸ್‌ಎಲ್‌ ಮಾದರಿ

   ಎಸ್‌ಎಸ್‌ಎಲ್‌ ಮಾದರಿ

   ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದ ಮಾದರಿಯಲ್ಲಿಯೇ ಈ ಸಿಇಟಿ ಪರೀಕ್ಷೆಯನ್ನೂ ನಡೆಸಲಾಗುತ್ತದೆ. ಈಗಾಗಲೇ ಸಿಇಟಿ ವಿಚಾರವಾಗಿ ಹಲವು ಸಭೆಗಳನ್ನು ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮಣರೆಡ್ಡಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿದ್ಧತೆ ಮಾಡಿಕೊಂಡಿದ್ದಾರೆ‌ ಎಂದು ಸಚಿವ ಅಶ್ವಥ್‌ ನಾರಾಯಣ ತಿಳಿಸಿದರು.

   ಸಿಇಟಿ ಪರೀಕ್ಷೆಗೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸೂಚನೆ

   ಹೊರ ದೇಶ, ರಾಜ್ಯ

   ಹೊರ ದೇಶ, ರಾಜ್ಯ

   ಹೊರ ರಾಜ್ಯದ 1,800 ಮಂದಿ ವಿದ್ಯಾರ್ಥಿಗಳು ಸಿಇಟಿ ಬರೆಯಲು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬಂದು ಪರೀಕ್ಷೆ ಬರುಯುವ ವಿದ್ಯಾರ್ಥಿಗಳಿಗೆ ನಮ್ಮ ರಾಜ್ಯದ ಗಡಿಭಾಗದಲ್ಲಿಯೇ ಪರೀಕ್ಷೆ ಬರೆಯುವ ಅನುಕೂಲ ಮಾಡಿಕೊಡಲಾಗಿದೆ. ಜೊತೆಗೆ ಹೊರ ದೇಶಗಳಿಂದಲೂ 40 ಮಂದಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಅವರಿಗೂ ಪ್ರತ್ಯೇಕ ಪರೀಕ್ಷಾ ಕೇಂದ್ರಗಳು ನೀಡಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರಗಳ ಬಳಿ ಅಂಬ್ಯುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

   English summary
   The state government has decided to make the CET test as scheduled. The Department of Higher Education has decided to conduct CET test in the same manner as SSLC and the department is prepared to face a bigger challenge.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X