7th Pay Commission: 7 ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಶುಭ ಸುದ್ದಿ: ಸಿ ಎಸ್ ಷಡಾಕ್ಷರಿ ಏನಂದ್ರು?
ಶಿವಮೊಗ್ಗ, ಜೂನ್ 19: : ರಾಜ್ಯದ ಸರ್ಕಾರಿ ನೌಕರರಿಗೆ ಲೋಕಸಭಾ ಚುನಾವಣೆಯ ನಂತರ ಸಿಗಲಿದೆ ಏಳನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ. ಏಳನೇ ವೇತನ ಆಯೋಗವನ್ನು ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದು, 7 ನೇ ವೇತನ ಆಯೋಗದ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 7 ನೇ ವೇತನ ಆಯೋಗದ ಬಗ್ಗೆ ರಾಜ್ಯ ಸರ್ಕಾರ ನಮಗೆ ಸ್ಪಂಧಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ, ಚುನಾವಣೆ ಮುಗಿದ ಬಳಿಕ ನೋಡೋಣ ಎಂದಿದ್ದರು. ನೀತಿ ಸಂಹಿತೆ ಮುಗಿದ ಬಳಿಕ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಈಗಾಗಲೇ ವರದಿ ಬಂದಿದ್ದು, ಅವರ ಮಾತಿನಂತೆ ನಡೆದುಕೊಳ್ಳುತ್ತಾರೆಂಬ ವಿಶ್ವಾಸ ಇದೆ, 7 ನೇ ವೇತನ ಆಯೋಗದ ವರದಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ ಓಪಿಎಸ್ ಬಗ್ಗೆ ಕೂಡ ಮನವಿ ಮಾಡಲಾಗಿದೆ. ಸರ್ಕಾರ ಉದಾಸೀನ ಮಾಡಬಾರದೆಂದು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ನಾವು ಸರ್ಕಾರಕ್ಕೆ ಮನವಿ ಮಾಡಿದ್ದೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಮ್ಮ ಹಿತದೃಷ್ಟಿಯಿಂದ ಸ್ಪಂಧಿಸಿದ್ದಾರೆ. 7 ನೇ ವೇತನ ಆಯೋಗ ಮತ್ತು ಓಪಿಎಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಸಲಾಗುತ್ತಿದೆ. ಜೂನ್ 23 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಸಭೆ ನಡೆಯಲಿದೆ, ಅಂದು ನೂತನವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದಿಸಲಾಗುವುದು. ಅಂದೆ ನವೀಕೃತ ಭವನದ ಉದ್ಘಾಟನೆ ನೆರವೇರಲಿದೆ. ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.












Click it and Unblock the Notifications