ಗುತ್ತಿಗೆ ನೌಕರಿಗೆ ಸಿಹಿ ಸುದ್ದಿ: ಶೇ.15 ಹೆಚ್ಚಳ ಸಂಭಾವನೆ ಹೆಚ್ಚಿಸಿ ಸರ್ಕಾರ ಆದೇಶ
ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ.
ಬೆಂಗಳೂರು,ಮಾರ್ಚ್ 4: ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ಸಂಭಾವನೆಯನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಇನ್ನೂ ಗುತ್ತಿಗೆ ನೌಕರರ ಸಂಭಾವನೆಯೂ ಏಪ್ರಿಲ್ 1 ರಿಂದ ಇದು ಅನ್ವಯವಾಗಲಿದ್ದು, ಈ ವೇತನ ಹೆಚ್ಚಳ ಒಳಗುತ್ತಿಗೆ, ಗುತ್ತಿಗೆ ನೌಕರರಿಗೆ ಮಾತ್ರ ಅನ್ವಯವಾಗಲಿದ್ದು, ಹೊರ ಗುತ್ತಿಗೆ ನೌಕರರಿಗೆ ಅನ್ವಯವಾಗುವುದಿಲ್ಲ. ಈ ಸಂಬಂಧ ಆರೋಗ್ಯ ಸಚಿವ, ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವ ಆಗ್ರಹ ಬಂದಿತ್ತು. ಈ ವೇಳೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ವೇತನ ಹೆಚ್ಚಳ ಮಾಡಲು ಕ್ರಮ ವಹಿಸುವ ಬಗ್ಗೆ ಆಶ್ವಾಸನೆ ನೀಡಿದ್ದರು.
ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, NHM ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ.
— Dr Sudhakar K (@mla_sudhakar) March 4, 2023
1/2 pic.twitter.com/oAhhHcl8aC
ಕೆಲಸಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿದ ಎನ್‌ಎಚ್‌ಎಂ ಮೆಡಿಕಲ್ ಅಧಿಕಾರಿಗಳಿಗೆ (ಎಂಬಿಬಿಎಸ್, ಆಯುಷ್, ಆರ್‌ಬಿಎಸ್‌ಕೆ, ದಂತವೈದ್ಯ ಸರ್ಜನ್‌ಗಳು) ಕೂಡ ಶೇ.15 ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ.
ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10, 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15 ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ.












Click it and Unblock the Notifications