Good News : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವಧನ ಹೆಚ್ಚಳ

ಬೆಂಗಳೂರು, ಜನವರಿ 31: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸಂಕಷ್ಟದಲ್ಲಿದ್ದ ಅತಿಥಿ ಶಿಕ್ಷಕರಿಗೆ ಶುಭಸುದ್ದಿ ಸಿಕ್ಕಂತಾಗಿದೆ.

ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ.

State government increases honorarium for guest teachers and lecturers

ಇನ್ನೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು ರೂ.18,150ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆಯ ಮಹತ್ವದ ಅಂಶಗಳು

ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮೂಲಸೌಲಭ್ಯ ವಲಯದ ಪಿಪಿಪಿ ಯೋಜನೆಗಳ ನೀತಿ, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ಸಂ: 3 ರ ಬದಲಿಗೆ ರಸ್ತೆ ಮೇಲ್ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾಮಗಾರಿಯನ್ನು 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 44.50 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ತಾಲ್ಲೂಕು, ಬಿಡದಿ ಹೋಬಳಿಯ ವಿವಿಧ ಗ್ರಾಮಗಳು ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಬಾಗಶಃ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ "ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ" ಯೋಜನೆಯನ್ನು ಅನುಷ್ಟಾನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+